HomeEntertainmentಚಿತ್ರೋದ್ಯಮಕ್ಕೆ ‘ಬಹುಮುಖಿ’ ದ್ವಾರಕೀಶ್ ಕೊಡುಗೆ ಅಪಾರ: ಪ್ರಧಾನಿ ಮೋದಿ ಸಂತಾಪ

ಚಿತ್ರೋದ್ಯಮಕ್ಕೆ ‘ಬಹುಮುಖಿ’ ದ್ವಾರಕೀಶ್ ಕೊಡುಗೆ ಅಪಾರ: ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದು, ಚಿತ್ರರಂಗಕ್ಕೆ ದ್ವಾರಕೀಶ್ ನೀಡಿದ ಕೊಡುಗೆ ಸ್ಮರಿಸಿದ್ದಾರೆ.

ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಜೀ ಅವರ ಕೊಡುಗೆ ಅಪಾರವಾಗಿದೆ, ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿ ಮರೆಯಲಾಗದ ಚಲನಚಿತ್ರಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಪ್ರೇಕ್ಷಕರನ್ನು ಆಕರ್ಷಿಸುವ ಮತ್ತು ಯುವ ಪ್ರತಿಭೆಗಳನ್ನು ಬೆಂಬಲಿಸುವ ಮೂಲಕ ಕನ್ನಡ ಚಿತ್ರರಂಗವನ್ನು ರೂಪಿಸುವಲ್ಲಿ ಅವರು ಬಹುಮುಖಿ ಪಾತ್ರ ವಹಿಸಿದ್ದಾರೆ. ಅವರ ಸಾಮರ್ಥ್ಯ ಅಪಾರವಾದುದು. ಅವರ ನಿಧನದಿಂದ ದುಃಖವಾಗಿದೆ. ಅವರ ಸೇವೆಯನ್ನು ನಾವು ಸದಾ ಸ್ಮರಿಸುತ್ತೇವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular