HomeKarnatakaಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಕಟ್ಟಡ ನಿರ್ಮಾಣ: ಪರಿಸರವಾದಿಗಳ ಆಕ್ಷೇಪ

ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಕಟ್ಟಡ ನಿರ್ಮಾಣ: ಪರಿಸರವಾದಿಗಳ ಆಕ್ಷೇಪ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು, ಪರಿಸರವಾದಿಗಳಿಂದ ಆಕ್ಷೇಪ ವ್ಯಕ್ತವಾಗಿದೆ.

ವಾಸ ಮತ್ತು ಕೃಷಿ ಉದ್ದೇಶದಿಂದ ತಾತ್ಕಾಲಿಕ ಮನೆ ನಿರ್ಮಾಣಕ್ಕೆ ಅನುಮತಿ ಪಡೆದು ಬೃಹತ್ ಕಟ್ಟಡ ನಿರ್ಮಿಸುತ್ತಿರುವ ಆರೋಪ ಕೇಳಿ ಬಂದಿದೆ. ಕಟ್ಟಡ ನಿರ್ಮಾಣಕ್ಕೆ ದೊಡ್ಡ ಗಾತ್ರದ ಕಾಂಕ್ರೀಟ್ ಪಿಲ್ಲರ್ ಗಳನ್ನು ಹಾಕಲಾಗಿದ್ದು, ಜೆಸಿಬಿ ಬಳಕೆ ಮಾಡಲಾಗಿದೆ. ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುಂಡ್ಲುಪೇಟೆ ತಾಲೂಕು ಹಂಗಳ ಹೋಬಳಿ ಜಕ್ಕಳ್ಳಿಯಲ್ಲಿ ಒಂದು ಎಕರೆ 24 ಗುಂಟೆ ಜಮೀನಿದ್ದು, ವಾಸದ ಮನೆ ಮತ್ತು ತೋಟಗಾರಿಕೆ ಉದ್ದೇಶದಿಂದ ಸುತ್ತಲೂ ಕಾಂಪೌಂಡ್ ನಿರ್ಮಿಸಲು ಗಣೇಶ್ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಜಮೀನು ಇದೆ. ಅಧಿಸೂಚನೆ ಪ್ರಕಾರ ವಾಣಿಜ್ಯ ಚಟುವಟಿಕೆಗಳಿಗೆ ಪರಿಸರ ಸೂಕ್ಷ್ಮ ವಲಯದಲ್ಲಿ ಅವಕಾಶ ಇಲ್ಲ. ಶಾಶ್ವತ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ತಾತ್ಕಾಲಿಕ ಕಟ್ಟಡಗಳನ್ನು ವಸತಿ ಉದ್ದೇಶಕ್ಕೆ ಮಾತ್ರ ನಿರ್ಮಿಸಿ ಬಳಸಬಹುದಾಗಿದೆ. ವನ್ಯಜೀವಿಗಳ ಸಂಚಾರಕ್ಕೆ ತೊಂದರೆ ಮಾಡುವಂತಿಲ್ಲ. ಇವೆಲ್ಲ ಷರತ್ತುಗಳೊಂದಿಗೆ ಪರಿಸರ ಸೂಕ್ಷ್ಮ ವಲಯ ಮೇಲ್ವಿಚಾರಣಾ ಸಮಿತಿ ಗಣೇಶ್ ಅವರಿಗೆ ಅನುಮತಿ ನೀಡಿದ್ದು, ಮಾರ್ಗಸೂಚಿಗೆ ವಿರುದ್ಧವಾಗಿ ಬೃಹತ್ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular