HomeLatest Newsಮೈಸೂರಿನಲ್ಲಿ ಸಿದ್ಧರಾಮಯ್ಯ ಭೇಟಿಯಾದ ನಟ ಕಿಚ್ಚ ಸುದೀಪ್

ಮೈಸೂರಿನಲ್ಲಿ ಸಿದ್ಧರಾಮಯ್ಯ ಭೇಟಿಯಾದ ನಟ ಕಿಚ್ಚ ಸುದೀಪ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಮೈಸೂರಿನಲ್ಲಿ ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ನಟ ಕಿಚ್ಚ ಸುದೀಪ್ ಅವರು ಸಿಕ್ಕು, ಆತ್ಮೀಯವಾಗಿ ಮಾತನಾಡಿದರು.

ಮೈಸೂರಿನಲ್ಲಿಂದು ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಅವರು ಸಿಕ್ಕು, ಆತ್ಮೀಯವಾಗಿ ಮಾತನಾಡಿದರು. ಈ ವೇಳೆ ಅವರ ಕಲಾಬದುಕು ಯಶಸ್ಸಿನಿಂದ ತುಂಬಿರಲಿ ಎಂದು ಶುಭ ಹಾರೈಸಿದೆ ಎಂದು ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಿಎಂ,ತಿಳಿಸಿದ್ದಾರೆ.

ಸೆ. 28ರಿಂದ ‘ಬಿಗ್ ಬಾಸ್’ ಆರಂಭ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟಂಬರ್ 28 ರಿಂದ ‘ಬಿಗ್ ಬಾಸ್’ ರಿಯಾಲಿಟಿ ಶುರುವಾಗಲಿದೆ ಎಂದು ನಟ ಸುದೀಪ್ ಹೇಳಿದ್ದಾರೆ. ಮೈಸೂರು ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ನಡೆದ ಸಂದೇಶ್ ನಾಗರಾಜ್ ಹುಟ್ಟುಹಬ್ಬದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ‘ಬಿಗ್ ಬಾಸ್ ರಿಯಾಲಿಟಿ ಶೋ ಸಾರಥಿಯಾಗಿರುವ ಸುದೀಪ್ ಅವರು, ಸೆಪ್ಟೆಂಬರ್ 28ರಿಂದ ಕಿರುತೆರೆಯಲ್ಲಿ ಕಾಣಿಸಿಕೊಳ್ಳುವುದಾಗಿ ಹೇಳಿದ್ದಾರೆ. ಸಂದೇಶ ನಾಗರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular