HomeEntertainment'Kiccha 46' Teaser : ನಾನು ಮನುಷ್ಯನಲ್ಲ ರಾಕ್ಷಸ : 'ಕಿಚ್ಚ 46' ರಗಡ್ ಟೀಸರ್...

‘Kiccha 46’ Teaser : ನಾನು ಮನುಷ್ಯನಲ್ಲ ರಾಕ್ಷಸ : ‘ಕಿಚ್ಚ 46’ ರಗಡ್ ಟೀಸರ್ ರಿಲೀಸ್

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ( Actor Sudeep ) ಅಭಿನಯದ 46 ನೇ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಬಹಳ ಕುತೂಹಲವಿದೆ. ಸದ್ಯ, ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ನಟ ಸುದೀಪ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

ಬಹಳ ಅದ್ದೂರಿಯಾಗಿ ಟೀಸರ್ ರಿಲೀಸ್ ಆಗಿದ್ದು, ನಾನು ಮನುಷ್ಯ ಅಲ್ಲ, ನಾನು ರಾಕ್ಷಸ ಎಂದು ಟೀಸರ್ ನ ಕೊನೆಯಲ್ಲಿ ಸುದೀಪ್ ಡೈಲಾಗ್ ಹೇಳಿದ್ದಾರೆ. ಈ ಮೂಲಕ ಸುದೀಪ್ ಹೊಸ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿದೆ.

ಹೊಸ ಸಿನಿಮಾವನ್ನು ತಮಿಳಿನ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್ ತನು ನಿರ್ಮಿಸುತ್ತಿದ್ದು ಚಿತ್ರದ ಪಾತ್ರ ವರ್ಗದ ಬಗ್ಗೆ ಮಾಹಿತಿ ಹೊರ ಬಿದ್ದಿಲ್ಲ. ವಿಕ್ರಾಂತ್ ರೋಣ’ ಸಿನಿಮಾ ಬಿಡುಗಡೆ ಬಳಿಕ ಅವರು ಒಂದು ಬ್ರೇಕ್ ತೆಗೆದುಕೊಂಡ ಕಿಚ್ಚ ಸುದೀಪ್ ನಂತರ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಬ್ಯುಸಿಯಾಗಿದ್ದರು. ನಂತರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಇದೀಗ ತಮ್ಮ 46 ನೇ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular