HomeEntertainment50ನೇ ವಸಂತಕ್ಕೆ ಕಾಲಿಟ್ಟ ನಟ ಕಿಶೋರ್

50ನೇ ವಸಂತಕ್ಕೆ ಕಾಲಿಟ್ಟ ನಟ ಕಿಶೋರ್

ಕನ್ನಡ ಸೇರಿದಂತೆ ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಖಳನಾಯಕ ಹಾಗೂ ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಜನಪ್ರಿಯತೆ ಹೊಂದಿರುವ ಪ್ರತಿಭಾವಂತ ನಟ ಕಿಶೋರ್ ಇಂದು ತಮ್ಮ 50ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.

2004ರಲ್ಲಿ ತೆರೆ ಕಂಡ ‘ಕಾಂತಿ’ ಚಿತ್ರದಲ್ಲಿ ಬೀರಾ ಪಾತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ಕಿಶೋರ್ ಅವರ ಅದ್ಭುತ ನಟನೆಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯು ದೊರೆಯಿತು. ಬಳಿಕ ‘ಆಕಾಶ್’ ‘ಸಿದ್ದು’  ‘ವಿಷ್ಣುಸೇನಾ’ ‘ಅಂಬಿ’ ಸೇರಿದಂತೆ ಸಾಲು ಸಾಲು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡರು.

2006 ರಂದು ಅಲ್ಲು ಅರ್ಜುನ್ ನಟನೆಯ ‘ಹ್ಯಾಪಿ’ ಚಿತ್ರದಲ್ಲಿ ಖಳನಾಯಕನಾಗಿ ಕಾಣಿಸಿಕೊಳ್ಳುವ ಮೂಲಕ ಟಾಲಿವುಡ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ನಂತರ ತಮಿಳು, ಮಲಯಾಳಂ, ಚಿತ್ರರಂಗದಲ್ಲೂ ಸಾಕಷ್ಟು ಹೆಸರು ಮಾಡಿದರು. ಕಳೆದ ವರ್ಷ ‘ಪೆಂಟಗನ್’ ನಲ್ಲಿ  ಕಾಣಿಸಿಕೊಂಡಿದ್ದ ಕಿಶೋರ್ ಇತ್ತೀಚಿಗೆ ಯುವ ಸಿನಿಮಾದಲ್ಲಿ ಅಭಿನಯಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular