HomeKarnatakaBREAKING : ನಟ ಮಂಡ್ಯ ರಮೇಶ್ ಸಹೋದರ ಆನಂದ್ ಕುಮಾರ್ ಹೃದಯಾಘಾತದಿಂದ ನಿಧನ

BREAKING : ನಟ ಮಂಡ್ಯ ರಮೇಶ್ ಸಹೋದರ ಆನಂದ್ ಕುಮಾರ್ ಹೃದಯಾಘಾತದಿಂದ ನಿಧನ

ಬೆಂಗಳೂರು: ಹಿರಿಯ ರಂಗಭೂಮಿ ಹಾಗೂ ಚಲನಚಿತ್ರ ನಟ ಮಂಡ್ಯ ರಮೇಶ್ ಅವರ ಹಿರಿಯ ಸಹೋದರ ಆನಂದ್ ಕುಮಾರ್ (65) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದಿಂದ ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಕಲಾರಂಗದ ಸ್ನೇಹಿತರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಆನಂದ್ ಕುಮಾರ್ ಅವರಿಗೆ ರಕ್ತದೊತ್ತಡ ಏರುಪೇರಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಹಲವಾರು ಕಲಾವಿದರು ಹಾಗೂ ಆತ್ಮೀಯರು ಮಂಡ್ಯ ರಮೇಶ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬೆಳ್ಳೂರಿನ ಮೂಲದ ಮಂಡ್ಯ ರಮೇಶ್ ಅವರು ರಂಗಭೂಮಿ ಮತ್ತು ಕನ್ನಡ ಚಿತ್ರರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಕುಟುಂಬದೊಂದಿಗೆ ಆನಂದ್ ಕುಮಾರ್ ಅವರು ಆತ್ಮೀಯ ಬಾಂಧವ್ಯ ಹೊಂದಿದ್ದು, ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನಂದ್ ಕುಮಾರ್ ಅವರ ಅಂತ್ಯಕ್ರಿಯೆ ಕುಟುಂಬದ ಸಂಪ್ರದಾಯದಂತೆ ನಡೆಯಲಿದ್ದು, ಬಂಧು-ಬಳಗ, ಸ್ನೇಹಿತರು ಹಾಗೂ ಗಣ್ಯರು ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಕಲಾರಂಗದ ಅನೇಕ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular