HomeIndiaಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಪತ್ರಕರ್ತನ ಕ್ಷಮೆಯಾಚಿಸಿದ ನಟ ಮೋಹನ್ ಬಾಬು

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಪತ್ರಕರ್ತನ ಕ್ಷಮೆಯಾಚಿಸಿದ ನಟ ಮೋಹನ್ ಬಾಬು

ಹೈದರಾಬಾದ್: ತಮ್ಮ ನಿವಾಸದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ನಟ ಮೋಹನ್ ಬಾಬು ಭಾನುವಾರ ಆಸ್ಪತ್ರೆಗೆ ತೆರಳಿ ಗಾಯಾಳು ಪತ್ರಕರ್ತನ ಕ್ಷಮೆ ಯಾಚಿಸಿದ್ದಾರೆ.

ಪತ್ರಕರ್ತ ರಂಜಿತ್ ಕುಮಾರ್ ಭೇಟಿಯಾದ ಅವರು ನಡೆದ ಘಟನೆ ದುರದೃಷ್ಟಕರ ಎಂದು ಕ್ಷಮೆ ಕೋರಿದ್ದಾರೆ. ಈ ಬಗ್ಗೆ ಮಾತನಾಡಿದ ರಂಜಿತ್ ಕುಮಾರ್, ನಟ ಮೋಹನ್ ಬಾಬು ಮತ್ತು ಅವರ ಹಿರಿಯ ಪುತ್ರ ವಿಷ್ಣು ನನ್ನ ಮೇಲಿನ ಹಲ್ಲೆಯನ್ನು ದುರದೃಷ್ಟಕರ ಎಂದು ತಿಳಿಸಿದ್ದಾರೆ. ನನಗೆ, ನನ್ನ ಪರಿವಾರ ಮತ್ತು ಎಲ್ಲಾ ಪತ್ರಕರ್ತರ ಬಳಿ ಕ್ಷಮೆ ಯಾಚಿಸಿದ್ದಾರೆ. ಅಲ್ಲದೇ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ನನ್ನ ಮನೆಗೆ ಬರುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular