BIG NEWS: ನಟ ನಾಗಭೂಷಣ್ ಸ್ಟೇಷನ್ ಬೇಲ್ ಮೇಲೆ ರಿಲೀಸ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ನಟ ನಾಗಭೂಷಣ್ ಅವರನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.

ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಡಿಸಿಪಿ ಶಿವಪ್ರಕಾಶ್ ದೇವರಾಜ್, ಕಾರು ಅಪಘಾತದಲ್ಲಿ ಮಹಿಳೆ ಪ್ರೇಮಾ ಸಾವನ್ನಪ್ಪಿದ್ದು, ಆಕೆಯ ಪತಿ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕನ ಅತಿವೇಗ ಹಾಗೂ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ.

ಪ್ರಕರಣ ಸಂಬಂಧ ನಟ ನಾಗಭೂಷಣ್ ಅವರನ್ನು ಬಂಧಿಸಿ, ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಮತ್ತೆ ಕರೆದಾಗ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ಆಲ್ಕೋಹಾಲ್ ಟೆಸ್ಟಿಂಗ್ ಮೀಟರ್ ನಲ್ಲಿ ಪರೀಕ್ಷಿಸಿದಾಗ ನಾಗಭೂಷಣ್ ಮದ್ಯ ಸೇವಿಸಿರಲಿಲ್ಲ. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅಲ್ಲಿಯೂ ನಾಗಭೂಷಣ್ ಮದ್ಯ ಸೇವನೆ ಮಾಡಿಲ್ಲ ಎಂದು ವರದಿ ಬಂದಿದೆ ಎಂದು ತಿಳಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read