36ನೇ ವಸಂತಕ್ಕೆ ಕಾಲಿಟ್ಟ ನಿಖಿಲ್ ಕುಮಾರಸ್ವಾಮಿ

Move it like Nikhil Kumaraswamy- Cinema express

ಸ್ಯಾಂಡಲ್ವುಡ್ ನಲ್ಲಿ ಆಕ್ಷನ್ ಸಿನಿಮಾಗಳ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದಿರುವ ನಿಖಿಲ್ ಕುಮಾರಸ್ವಾಮಿ ಇಂದು 36ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ವರ್ಷ ತಮ್ಮ ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬವನ್ನು ಸೆಲೆಬ್ರೇಟ್ ಮಾಡುತ್ತಿದ್ದ ನಿಖಿಲ್ ಕುಮಾರಸ್ವಾಮಿ ಅಯೋಧ್ಯೆಗೆ ಹೊರಟಿರುವ ಕಾರಣ ಈ ಬಾರಿ  ಆಚರಿಸಿಕೊಳ್ಳುವುದಿಲ್ಲ ಎಂದು ಈಗಾಗಲೇ  ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.

ಸಿನಿಮಾ ವಿಚಾರಕ್ಕೆ ಬಂದರೆ 2016ರಲ್ಲಿ ತೆರೆ ಕಂಡ ಮಹದೇವ್ ನಿರ್ದೇಶನದ ‘ಜಾಗ್ವಾರ್’ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದ ನಿಖಿಲ್ ಕುಮಾರಸ್ವಾಮಿ, ಬಳಿಕ ಡಿಂಪಲ್ ಕ್ವೀನ್ ರಚಿತಾ ರಾಮ್ ಜೊತೆ ‘ಸೀತಾರಾಮ ಕಲ್ಯಾಣ’ ಸಿನಿಮಾದಲ್ಲಿ ಅಭಿನಯಿಸಿದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ‘ಕುರುಕ್ಷೇತ್ರ’ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಿಖಿಲ್ ಕುಮಾರಸ್ವಾಮಿ, 2021 ರಲ್ಲಿ ಕೊನೆಯದಾಗಿ ‘ರೈಡರ್’ ನಲ್ಲಿ ನಟಿಸಿದ್ದರು. ಇತ್ತೀಚಿಗೆ ‘ಯದುವೀರ’ ಶೂಟಿಂಗ್ ನಲ್ಲಿ ಬಿಜಿಯಾಗಿದ್ದು, ಇಂದು ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರಕಂಡ ವಿಶೇಷ ಉಡುಗೊರೆ ನೀಡಲು ಸಜ್ಜಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read