ಬೆಂಗಳೂರಲ್ಲಿ ನಟ ಪ್ರಭಾಸ್-ಅಲ್ಲು ಅರ್ಜುನ್ ಫ್ಯಾನ್ಸ್ ನಡುವೆ ಮಾರಾಮಾರಿ : ವಿಡಿಯೋ ವೈರಲ್ |Video

ನಟ ಅಲ್ಲು ಅರ್ಜುನ್ ಮತ್ತು ಪ್ರಭಾಸ್ ಭಾರಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತಾರೆಯರ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ತಮಾಷೆ ಮತ್ತು ಕಿರಿಕ್ ಮಾಡಿಕೊಳ್ಳುವ ವಿಚಾರ ಸಾಮಾನ್ಯವಾಗಿದೆ. ಆದರೆ ಬೆಂಗಳೂರಿನಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ ಅಲ್ಲು ಅರ್ಜುನ್ ಮತ್ತು ಪ್ರಭಾಸ್ ಅಭಿಮಾನಿಗಳು ಮನಬಂದಂತೆ ಹೊಡೆದಾಡಿದ ವಿಡಿಯೋ ಭಾರಿ ವೈರಲ್ ಆಗಿದೆ.

ಬೆಂಗಳೂರಿನಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ ಅಲ್ಲು ಅರ್ಜುನ್ ಮತ್ತು ಪ್ರಭಾಸ್ ಅಭಿಮಾನಿಗಳು ಜಗಳವಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕೋಲಾಹಲ ಸೃಷ್ಟಿಸಿದೆ ಅಲ್ಲು ಅರ್ಜುನ್ ಅವರ ಅಭಿಮಾನಿಗಳು, ಪ್ರಭಾಸ್ ಅಭಿಮಾನಿಗಳ ಜೊತೆ ರಕ್ತ ಬರುವಂತೆ ಹೊಡೆದಾಡಿದ್ದಾರೆ.

ಘಟನೆ ಸಂಬಂಧ ಸ್ಥಳೀಯ ಪೊಲೀಸರು ಮಧ್ಯಪ್ರವೇಶಿಸಿ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಅಭಿಮಾನಿಗಳು ಹಿಂಸಾಚಾರಕ್ಕೆ ಎಡೆಮಾಡಿಕೊಡದೇ ಶಾಂತಿಯುತವಾಗಿ ಮತ್ತು ಗೌರವಯುತವಾಗಿ ತಮ್ಮ ನೆಚ್ಚಿನ ತಾರೆಯರಿಗೆ ತಮ್ಮ ಬೆಂಬಲವನ್ನು ನೀಡಬೇಕು ಎಂದು ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡಿದ್ದಾರೆ.

https://twitter.com/TeluguScribe/status/1766810987762511980?ref_src=twsrc%5Etfw%7Ctwcamp%5Etweetembed%7Ctwterm%5E1766810987762511980%7Ctwgr%5E2124d18a9047dbf41a3df7117ae0d8406b828a21%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fwatch-viedo-prabhas-allu-fans-clash-video-goes-viral%2F

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read