ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ರಾಘವೇಂದ್ರ ರಾಜಕುಮಾರ್

Raghavendra rajkumar Latest News Galatta.com

ನಟ ಸಾರ್ವಭೌಮ ಡಾ. ರಾಜಕುಮಾರ್ ಅವರ ಎರಡನೇ ಪುತ್ರ ರಾಘವೇಂದ್ರ ರಾಜಕುಮಾರ್ ಇಂದು ತಮ್ಮ 58ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

1975ರಲ್ಲಿ ತೆರೆಕಂಡ ಡಾ. ರಾಜಕುಮಾರ್ ನಟನೆಯ ‘ಶ್ರೀ ಶ್ರೀನಿವಾಸ ಕಲ್ಯಾಣ’ ಚಿತ್ರದಲ್ಲಿ ಬಾಲ ಕಲಾವಿದನಾಗಿ ಅಭಿನಯಿಸುವ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು. ಬಾಲ ನಟನಾಗಿ ಎರಡು ಸಿನಿಮಾಗಳಲ್ಲಿ ಕಾಣಿಸಿಕೊಂಡ ರಾಘವೇಂದ್ರ ರಾಜಕುಮಾರ್, ನಂತರ 1988 ರಲ್ಲಿ ತೆರೆ ಕಂಡ ‘ಚಿರಂಜೀವಿ ಸುಧಾಕರ್’ ಮತ್ತು ‘ನಂಜುಂಡಿ ಕಲ್ಯಾಣ’ ಚಿತ್ರಗಳ ಮೂಲಕ ನಾಯಕ ನಟನಾಗಿ ಗುರುತಿಸಿಕೊಂಡರು. ರಾಜಶೇಖರ್ ನಿರ್ದೇಶನದ ನಂಜುಂಡಿ ಕಲ್ಯಾಣ ಸಿನಿಮಾ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿತ್ತು. ರಾಘವೇಂದ್ರ ರಾಜಕುಮಾರ್ ಗೆ ಜೋಡಿಯಾಗಿ ಮಾಲಾಶ್ರೀ ಅಭಿನಯಿಸಿದ್ದರು.

ರಾಘವೇಂದ್ರ ರಾಜಕುಮಾರ್ ಗಾಯಕರಾಗಿಯೂ ಸಾಕಷ್ಟು ಹೆಸರು ಮಾಡಿದ್ದು, ‘ಜಾಕಿ’ ‘ಅಣ್ಣಾಬಾಂಡ್’ ‘ಯಾರೇ ಕೂಗಾಡಲಿ’ ‘ರನ್ ಆಂಟೋನಿ’ ಸೇರಿದಂತೆ ಕೆಲವು ಸಿನಿಮಾಗಳ ನಿರ್ಮಾಣ ಮಾಡಿದ್ದಾರೆ. ಕಳೆದ ವರ್ಷ ಪುನೀತ್ ರಾಜಕುಮಾರ್ ಅವರ ‘ಜೇಮ್ಸ್’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ಅವರ ಹುಟ್ಟುಹಬ್ಬದ ಪ್ರಯುಕ್ತ ಹಿರಿಯ ಕಲಾವಿದರು ಹಾಗೂ ಯುವ ನಟ – ನಟಿಯರು ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read