ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸದಲ್ಲಿದ್ದಾರೆ. ಇಂದು ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ್ದ ಸಿಎಂ ನಟ ಸುದೀಪ್ ಭೇಟಿಯಾಗಿ ಮಾತನಾಡಿ ಶುಭ ಹಾರೈಸಿದ್ದರು.
ಇದರ ಬೆನ್ನಲ್ಲೇ ಮೈಸೂರಿನಲ್ಲಿ ‘ಪೆದ್ದಿ’ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ತೆಲುಗು ಚಿತ್ರರಂಗದ ಖ್ಯಾತ ನಟ ರಾಮ್ ಚರಣ್ ಅವರನ್ನು ಸಿಎಂ ಭೇಟಿಯಾಗಿದ್ದಾರೆ. ಮೈಸೂರಿನ ನಿವಾಸದಲ್ಲಿ ರಾಮ್ ಚರಣ್ ಭೇಟಿಯಾದ ಸಿಎಂ ಶುಭ ಹಾರೈಸಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಪ್ರಭಾಕರ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.
ಪೆದ್ದಿ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ತೆಲುಗು ಚಿತ್ರರಂಗದ ಖ್ಯಾತ ನಟ ರಾಮಚರಣ್ ಅವರು ಇಂದು ಮೈಸೂರಿನಲ್ಲಿ ನನ್ನನ್ನು ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದರು. pic.twitter.com/wwmYlNOA6N
— Siddaramaiah (@siddaramaiah) August 31, 2025