HomeLatest Newsಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ನಟ ರಾಮ್ ಚರಣ್ ಭೇಟಿ, ಮಾತುಕತೆ

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ನಟ ರಾಮ್ ಚರಣ್ ಭೇಟಿ, ಮಾತುಕತೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸದಲ್ಲಿದ್ದಾರೆ. ಇಂದು ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ್ದ ಸಿಎಂ ನಟ ಸುದೀಪ್ ಭೇಟಿಯಾಗಿ ಮಾತನಾಡಿ ಶುಭ ಹಾರೈಸಿದ್ದರು.

ಇದರ ಬೆನ್ನಲ್ಲೇ ಮೈಸೂರಿನಲ್ಲಿ ‘ಪೆದ್ದಿ’ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ತೆಲುಗು ಚಿತ್ರರಂಗದ ಖ್ಯಾತ ನಟ ರಾಮ್ ಚರಣ್ ಅವರನ್ನು ಸಿಎಂ ಭೇಟಿಯಾಗಿದ್ದಾರೆ. ಮೈಸೂರಿನ ನಿವಾಸದಲ್ಲಿ ರಾಮ್ ಚರಣ್ ಭೇಟಿಯಾದ ಸಿಎಂ ಶುಭ ಹಾರೈಸಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಪ್ರಭಾಕರ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular