HomeEntertainmentಭೂ ಕಬಳಿಕೆ ಪ್ರಕರಣದಲ್ಲಿ ಖ್ಯಾತ ನಟ ರಾಣಾ ದಗ್ಗುಬಾಟಿ, ತಂದೆ ಸುರೇಶ್ ಬಾಬು ವಿರುದ್ಧ ಪ್ರಕರಣ...

ಭೂ ಕಬಳಿಕೆ ಪ್ರಕರಣದಲ್ಲಿ ಖ್ಯಾತ ನಟ ರಾಣಾ ದಗ್ಗುಬಾಟಿ, ತಂದೆ ಸುರೇಶ್ ಬಾಬು ವಿರುದ್ಧ ಪ್ರಕರಣ ದಾಖಲು

‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಹಾಗೂ ಅವರ ತಂದೆ ಸುರೇಶ್ ಬಾಬು ವಿರುದ್ಧ ಭೂಕಬಳಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ.

ದೂರುದಾರ ಉದ್ಯಮಿ ಪ್ರಮೋದ್ ಕುಮಾರ್ ಅವರು ಹೈದರಾಬಾದ್‌ನ ಫಿಲಂ ನಗರದಲ್ಲಿನ ಜಮೀನು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೌಡಿಗಳ ನೆರವಿನಿಂದ ತಮ್ಮನ್ನು ಹೊರಹಾಕಲಾಯಿತು. ರಾಣಾ ಮತ್ತು ಅವರ ತಂದೆ ಇಬ್ಬರೂ ಸ್ಥಳವನ್ನು ಖಾಲಿ ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಸುರೇಶ್ ಬಾಬು, ರಾಣಾ ದಗ್ಗುಬಾಟಿ ಮತ್ತು ಇತರ ಕೆಲವರ ವಿರುದ್ಧ ನಾಂಪಲ್ಲಿ ನ್ಯಾಯಾಲಯ ಪ್ರಕರಣ ದಾಖಲಿಸಿದೆ. ನ್ಯಾಯಾಲಯ ಸಮನ್ಸ್ ಕೂಡ ಜಾರಿ ಮಾಡುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular