BREAKING : ಮತ್ತೊಂದು ‘ಬಿಗ್ ಬಜೆಟ್’ ಸಿನಿಮಾ ಘೋಷಿಸಿದ ನಟ ರಿಷಬ್ ಶೆಟ್ಟಿ : ಪೋಸ್ಟರ್ ರಿಲೀಸ್.!

ಬೆಂಗಳೂರು : ಕಾಂತಾರ-1 ಚಿತ್ರದಲ್ಲಿ ಬ್ಯುಸಿಯಾಗಿರುವ ನಟ ರಿಷಬ್ ಶೆಟ್ಟಿ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿದೆ. ರಿಷಬ್ ಶೆಟ್ಟಿ ಮತ್ತೊಂದು ಹೊಸ ಬಿಗ್ ಬಜೆಟ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು, ಪೋಸ್ಟರ್ ರಿಲೀಸ್ ಆಗಿದೆ.

ಸಿನಿಮಾದ ಬಗ್ಗೆ ಯಾವುದೇ ಸುಳಿವು ನೀಡದೇ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ವಿಭಿನ್ನ ಗೆಟಪ್ ನಲ್ಲಿ ನಟ , ನಿರ್ದೇಶಕ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

ನನ್ನ ಮುಂದಿನ ಚಿತ್ರ, ನಿಮ್ಮ ಆಶೀರ್ವಾದ ಎಂದಿನಂತೆ ಸದಾ ಇರಲಿ Not all Rebels are forged in Battle. Some are chosen by Destiny And this is that story of a Rebel. ಎಂದು ನಟ ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.

ತೆಲುಗಿನ ಹನುಮಾನ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿದ್ದು, ಇದರ ನಡುವೆ ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾ ಘೋಷಣೆಯಾಗಿದೆ.ಈ ಚಿತ್ರವನ್ನು ಸಂದೀಪ್ ಸಿಂಗ್ ನಿರ್ದೇಶಿಸುತ್ತಿದ್ದು, 2027 ರ ಜನವರಿ 21 ರಂದು ತೆರೆಗೆ ಬರಲಿದೆ. ಈ ಸಿನಿಮಾ ಹಿಂದಿ, ಮರಾಠಿ, ಕನ್ನಡ ಸೇರಿ 6 ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ.ಸದ್ಯ ರಿಷಬ್ ಶೆಟ್ಟಿ ಕಾಂತಾರ ಸಿನಿಮಾದ ಪ್ರೀಕ್ವೆಲ್ ನಲ್ಲಿ ಬ್ಯುಸಿಯಾಗಿದ್ದು, ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read