ರಾವಣನ ಪಾತ್ರ ರಿಜೆಕ್ಟ್ ಮಾಡಿದ್ರಾ ನಟ ರಾಕಿಂಗ್ ಸ್ಟಾರ್ ಯಶ್ ?

ನಟ ಪ್ರಭಾಸ್ (Actor Prabhas) ನಟನೆಯ ಆದಿ ಪುರುಷ್ (Adi Purush) ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಈ ನಡುವೆ ಬಾಲಿವುಡ್ (Bollywood) ನಲ್ಲಿ ಮತ್ತೊಂದು ರಾಮಾಯಣದ ಕತೆ ಹೊತ್ತ ಚಿತ್ರವೊಂದು ತಯಾರಾಗಲು ಸಿದ್ಧತೆ ನಡೆಸಿದೆ. ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ (Rocking Star Yash) ಸಹ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಈ ಚಿತ್ರದಲ್ಲಿ ನಟಿಸುವುದಿಲ್ಲ ಎಂದು ಯಶ್ ಹೇಳಿದ್ದಾರೆ ಎನ್ನಲಾಗಿದೆ.

ಹೌದು, ಚಲನಚಿತ್ರ ನಿರ್ದೇಶಕ ನಿತೇಶ್ ತಿವಾರಿ ರಾಮಾಯಣದ ಬಗ್ಗೆ ಚಿತ್ರ ಮಾಡಲು ಹೊರಟಿದ್ದಾರೆ. ಈ ಚಿತ್ರದಲ್ಲಿ ಯಾವ ನಟರು ಕಾಣಿಸಿಕೊಳ್ಳಲಿದ್ದಾರೆ, ಯಾವ ನಟ ಯಾವ ಪಾತ್ರದಲ್ಲಿ ನಟಿಸಲಿದ್ದಾರೆ, ಈ ಚಿತ್ರವು ಕೆಲವು ದಿನಗಳಿಂದ ಚರ್ಚೆಯಲ್ಲಿದೆ. ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಮತ್ತು ಕೆಜಿಎಫ್ ಖ್ಯಾತಿಯ ನಟ ಯಶ್ ಅವರು ಈ ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಯಶ್ ಅವರು ಈ ಪಾತ್ರವನ್ನು ಒಪ್ಪಿಕೊಂಡಿಲ್ಲ ಎಂದು ಹೇಳಲಾಗಿದೆ.ನಿತೇಶ್ ತಿವಾರಿ ಅವರ ಚಿತ್ರದಲ್ಲಿ ರಣಬೀರ್ ಕಪೂರ್ ಭಗವಾನ್ ರಾಮನ ಪಾತ್ರದಲ್ಲಿ ಮತ್ತು ಆಲಿಯಾ ಭಟ್ ತಾಯಿ ಸೀತೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ,

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read