HomeEntertainmentBIG NEWS: ಖ್ಯಾತ ನಟ ಸಯಾಜಿ ಶಿಂಧೆಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

BIG NEWS: ಖ್ಯಾತ ನಟ ಸಯಾಜಿ ಶಿಂಧೆಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಮುಂಬೈ: ಬಹುಭಾಷಾ ನಟ ಸಯಾಜಿ ಶಿಂಧೆಗೆ ತೀವ್ರ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಯಾಜಿ ಶಿಂಧೆ ಅವರನ್ನು ಮಹಾರಾಷ್ಟ್ರದ ಸತಾರಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಿಗ್ಗೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಚಿಕಿತ್ಸೆ ವೇಳೆ ಹೃದಯದಲ್ಲಿ ರಕ್ತ ಪೂರೈಸುವ ನಾಳದಲ್ಲಿ ಬ್ಲಾಕ್ ಇರುವುದು ತಿಳಿದುಬಂದಿದೆ. ಚಿಕಿತ್ಸೆ ಮುಂದುವರೆದಿದ್ದು, ಗುಣಮುಖರಾಗುತ್ತಿದ್ದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular