ಬೆಂಗಳೂರು: ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ವಿರುದ್ಧದ ಅಸಭ್ಯ ವರ್ತನೆ ಕೇಸ್ ಮುಕ್ತಾಯವಾಗಿದೆ. ನವೆಂಬರ್ 28ರಂದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿರುವುದಕ್ಕೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪ್ರಕರಣವನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮುಕ್ತಾಯಗೊಳಿಸಿದ್ದಾರೆ.
ಬೆಂಗಳೂರಿನ ಪಬ್ ವೊಂದಕ್ಕೆ ಬಂದಿದ್ದ ವೇಳೆ ಆರ್ಯನ್ ಖಾನ್ ಸಾರ್ವಜನಿಕವಾಗಿ ಮಧ್ಯದ ಬೆರಳು ತೋರಿಸಿ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ವಕೀಲರೊಬ್ಬರು ದೂರು ದಾಖಲಿಸಿದ್ದರು. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ ಸಿಬ್ಬಂದಿ ವಿಚಾರಣೆ ನಡೆಸಿದ್ದರು. ಅವರು ಉದ್ದೇಶಪೂರ್ವಕವಾಗಿ ಆ ರೀತಿ ಅವರು ನಡೆದುಕೊಂಡಿಲ್ಲವೆಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಪ್ರಕರಣವನ್ನು ಪೊಲೀಸರು ಮುಕ್ತಾಯಗೊಳಿಸಿದ್ದಾರೆ ಎಂದು ಹೇಳಲಾಗಿದೆ.

