ನಟ ಶಿವರಾಜ್ ಕುಮಾರ್, ಪ್ರಕಾಶ್ ರಾಜ್ ಕ್ಷಮೆಯನ್ನು ನಾನು ಸ್ವೀಕರಿಸಲ್ಲ : ನಟ ಸಿದ್ದಾರ್ಥ್

ನಟ ಶಿವರಾಜ್ ಕುಮಾರ್, ಪ್ರಕಾಶ್ ರಾಜ್ ಕ್ಷಮೆಯನ್ನು ನಾನು ಸ್ವೀಕರಿಸಲ್ಲ ಎಂದು ನಟ ಸಿದ್ದಾರ್ಥ್ ಹೇಳಿದ್ದಾರೆ.

ತಮ್ಮ ಇತ್ತೀಚಿನ ಚಿತ್ರ ಚಿತ್ತಾ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಯೊಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಿಂದ ಹೊರನಡೆಯುವಂತೆ ಒತ್ತಾಯಿಸಿದ ಒಂದು ವಾರದ ನಂತರ, ನಟ ಸಿದ್ಧಾರ್ಥ್ ಈ ವಿಷಯವನ್ನು ಪ್ರಸ್ತಾಪಿಸಿ, ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಟ ಶಿವರಾಜ್ ಕುಮಾರ್, ಪ್ರಕಾಶ್ ರಾಜ್ ಕ್ಷಮೆಯನ್ನು ನಾನು ಸ್ವೀಕರಿಸಲ್ಲ . ಅವರಿಗೂ ಘಟನೆಗೂ ಸಂಬಂಧವೇ ಇಲ್ಲ, ಆದರೂ ಅವರು ಕ್ಷಮೆ ಕೇಳಿದ್ದಾರೆ. ಮಾಡದ ತಪ್ಪಿಗೆ ಅವರು ಕ್ಷಮೆ ಕೇಳಿದ್ದಾರೆ. ಇದರಿಂದ ಅವರ ಮೇಲಿನ ಗೌರವ ಇನ್ನಷ್ಟು ಹೆಚ್ಚಾಯಿತು ಎಂದಿದ್ದಾರೆ.

ಈ ಘಟನೆಯು ತಮಿಳುನಾಡು ಮತ್ತು ಕರ್ನಾಟಕ ಎರಡರಲ್ಲೂ ಸಾಕಷ್ಟು ವಿವಾದವನ್ನು ಹುಟ್ಟುಹಾಕಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಕನ್ನಡ ಚಿತ್ರರಂಗದ ಪರವಾಗಿ ನಟ ಶಿವರಾಜ್ ಕುಮಾರ್ ಅವರು ಸಿದ್ಧಾರ್ಥ್ ಅವರ ಕ್ಷಮೆಯಾಚಿಸಿದ್ದಾರೆ.

ತಮಿಳು ನಟ ಸಿದ್ದಾರ್ಥ್ ನಟನೆಯ ‘ಚಿಕ್ಕು’ ಸಿನಿಮಾದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಕನ್ನಡ ಪರ ಹೋರಾಟಗಾರರು ಅಡ್ಡಿಪಡಿಸಿದ್ದರು.ಕನ್ನಡ ಅವತರಣಿಕೆ ಪ್ರದರ್ಶನ ಮತ್ತು ಪತ್ರಿಕಾಗೋಷ್ಠಿ ಮಲ್ಲೇಶ್ವರಂನ ಎಸ್.ಆರ್.ವಿ. ಥಿಯೇಟರ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಿದ್ದಾರ್ಥ್ ಸುದ್ದಿಗೋಷ್ಠಿ ನಡೆಸುವ ವೇಳೆ ಏಕಾಏಕಿ ನುಗ್ಗಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read