ಬೆಂಗಳೂರು : ನಟ ಶಿವರಾಜ್ ಕುಮಾರ್ –ಉಪೇಂದ್ರ ಅಭಿನಯದ ಬಹು ನಿರೀಕ್ಷಿತ ‘45’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.
ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊಟ್ಟ ಮೊದಲ ಬಾರಿಗೆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾ ಈಗಾಗಲೇ ಬಹಳ ನಿರೀಕ್ಷೆ ಮೂಡಿಸಿದ್ದು, ಡಿ.25 ಕ್ಕೆ ಸಿನಿಮಾ ತೆರೆಗೆ ಬರಲಿದೆ. ಚಿತ್ರದ ಟ್ರೇಲರ್ ಸಿನಿಪ್ರಿಯರ ಗಮನ ಸೆಳೆದಿದೆ.
ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರಮೇಶ್ ರೆಡ್ಡಿ ನಿರ್ಮಿಸಿದ್ದಾರೆ. ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ, ಕೌಸ್ತುಭ ಮಣಿ ಮತ್ತು ಜಿಶು ಸೇನ್ಗುಪ್ತಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಸಂಗೀತ ಸಂಯೋಜಿಸಿದ್ದಾರೆ.ಈ ಚಿತ್ರವು ಡಿಸೆಂಬರ್ 25ರಂದು ಕ್ರಿಸ್ ಮಸ್ ಗೆ ಬಿಡುಗಡೆಯಾಗಲಿದೆ.
ಸತ್ಯ ಹೆಗ್ಡೆ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ ಮತ್ತು ಮೋಹನ್ ಪಂಡಿತ್ ಕಲಾ ನಿರ್ದೇಶನ ಮಾಡಿದ್ದಾರೆ. ಡಾ. ಕೆ. ರವಿವರ್ಮ, ಜಾಲಿ ಬಾಸ್ಟಿಯನ್, ಡಿಫರೆಂಟ್ ಡ್ಯಾನಿ ಮತ್ತು ಚೇತನ್ ಡಿಸೋಜಾ ಸಾಹಸ ಸಂಯೋಜನೆ ಮಾಡಿದ್ದಾರೆ, ಚಿನ್ನಿ ಪ್ರಕಾಶ್ ಮತ್ತು ಬಿ. ಧನಂಜಯ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿತ್ರದ 40% ಕ್ಕಿಂತ ಹೆಚ್ಚು VFX ಅವಲಂಬಿಸಿದೆ, ಇದನ್ನು ಹಾಲಿವುಡ್ ದರ್ಜೆಯ ದೃಶ್ಯ ಪರಿಣಾಮಗಳಿಗೆ ಹೆಸರುವಾಸಿಯಾದ ಕೆನಡಾದ ಕಂಪನಿಯಾದ MARZ ಸ್ಟುಡಿಯೋ(ಮಾನ್ಸ್ಟರ್ಸ್ ಏಲಿಯನ್ಸ್ ರೋಬೋಟ್ಸ್ ಜೋಂಬಿಸ್) ನಿರ್ವಹಿಸಿದೆ. . ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಚಿತ್ರ ಮೂಡಿ ಬಂದಿದೆ.

