ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸಿನಿಮಾ ಕಲಾವಿದರ ಸಂಘಕ್ಕೆ ರಾಜೀನಾಮೆ ನೀಡಿದ ನಟ

ತಿರುವನಂತಪುರಂ: ನಟಿಯೊಬ್ಬರು ಎತ್ತಿರುವ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ(ಎ.ಎಂ.ಎಂ.ಎ.) ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಖ್ಯಾತ ನಟ ಸಿದ್ದಿಕ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ನಟ, ಅಧ್ಯಕ್ಷ ಸಂಸ್ಥೆಯ ಮೋಹನ್ ಲಾಲ್ ರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿರುವುದಾಗಿ ಹೇಳಿದರು.

ಹೌದು, ನಾನು ನನ್ನ ಅಧಿಕೃತ ರಾಜೀನಾಮೆಯನ್ನು ಸಂಸ್ಥೆಯ ಅಧ್ಯಕ್ಷ ಮೋಹನ್ ಲಾಲ್ ಅವರಿಗೆ ಸಲ್ಲಿಸಿದ್ದೇನೆ. ನನ್ನ ವಿರುದ್ಧ ಆರೋಪಗಳಿರುವುದರಿಂದ ನಾನು ಹುದ್ದೆಯಲ್ಲಿ ಮುಂದುವರಿಯದಿರಲು ನಿರ್ಧರಿಸಿ ರಾಜೀನಾಮೆ ನೀಡಿದ್ದೇನೆ ಎಂದು ಸಿದ್ದಿಕ್ ಹೇಳಿದ್ದಾರೆ.

ಸಿನಿಮಾ ಚರ್ಚೆಗೆ ಆಹ್ವಾನಿಸಿದ ಬಳಿಕ ಸಿದ್ದಿಕ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ನಟಿಯೊಬ್ಬರು ಶನಿವಾರ ಆರೋಪಿಸಿದ್ದಾರೆ. ಜಸ್ಟಿಸ್ ಹೇಮಾ ಸಮಿತಿಯ ವರದಿಯ ಬಿಡುಗಡೆಯ ನಂತರ ಮಲಯಾಳಂ ಚಲನಚಿತ್ರೋದ್ಯಮದಲ್ಲಿನ ಬೆಳವಣಿಗೆಗಳ ಬಗ್ಗೆ ಆರೋಪ ಬಂದಿದೆ. ಇದು ಕ್ಷೇತ್ರದಲ್ಲಿನ ಲೈಂಗಿಕ ದೌರ್ಜನ್ಯದ ಹಲವಾರು ಘಟನೆಗಳ ಕಡೆಗೆ ಬೆಟ್ಟು ಮಾಡಿದೆ.

ಎಎಂಎಂಎ ಉಪಾಧ್ಯಕ್ಷ ಜಯನ್ ಚೇರ್ತಲ ಮಾತನಾಡಿ, ಸಿದ್ದಿಕ್ ವಿರುದ್ಧ ಇಂತಹ ಗಂಭೀರ ಆರೋಪಗಳು ಬಂದ ನಂತರವೂ ಆ ಸ್ಥಾನದಲ್ಲಿ ಮುಂದುವರಿಯುವುದು ಸೂಕ್ತವಲ್ಲ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read