HomeLatest NewsBIG NEWS: ಪಂಚಭೂತಗಳಲ್ಲಿ ಲೀನರಾದ ಉಮೇಶ್: ಹಾಸ್ಯ ನಟ ಇನ್ನು ನೆನಪು ಮಾತ್ರ

BIG NEWS: ಪಂಚಭೂತಗಳಲ್ಲಿ ಲೀನರಾದ ಉಮೇಶ್: ಹಾಸ್ಯ ನಟ ಇನ್ನು ನೆನಪು ಮಾತ್ರ

ಬೆಂಗಳೂರು: ಅನಾರೋಗ್ಯದಿಂದ ವಿಧಿವಶರಾಗಿರುವ ಕನ್ನಡ ಚಿತ್ರರಂಗದ ಹಾಸ್ಯ ನಟ ಎಂ.ಎಸ್. ಉಮೇಶ್ ಅಂತ್ಯಕ್ರಿಯೆ ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರೇರಿದೆ.

ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಉಮೇಶ್ (80) ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ೩೫೦ಕ್ಕೂ ಹೆಚ್ಚು ಚಲನ ಚಿತ್ರಗಳಲ್ಲಿ ಅಭಿನಯಿಸಿದ್ದ ಉಮೇಶ್ ಹಾಸ್ಯನಟರಾಗಿ ಜನಮನ ಗೆದ್ದಿದ್ದರು.

ಕಿದ್ವಾಯಿ ಆಸ್ಪತ್ರೆಯಿಂದ ಅವರ ಪಾರ್ಥಿವಶರೀರವನ್ನು ಜೆ.ಪಿನಗರದ ನಿವಾಸಕ್ಕೆ ಕೊಂಡೊಯ್ಯಲಾಗಿತ್ತು. ಬಳಿಕ ಬೆಳಿಗ್ಗೆ 11 ಗಂಟೆಗೆ ರವೀಂದ್ರ ಕಲಾ ಕ್ಷೇತ್ರಕ್ಕೆ ತರಲಾಗಿತ್ತು. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರವೀಂದ್ರ ಕಲಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ಗಣ್ಯರು, ಚಿತ್ರರಂಗದ ಗಣ್ಯರು ಉಮೇಶ್ ಅವರ ಅಂತಿಮ ದರ್ಶನ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಬನಶಂಕರಿ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಉಮೇಶ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಹಾಸ್ಯ ದಿಗ್ಗಜ ಉಮೇಶ್ ಪಂಚಭೂತಗಳಲ್ಲಿ ಲೀನರಾಗಿದ್ದು, ಅವರ ವಿಶಿಷ್ಠ ಅಭಿನಯ, ನಗೆಕಚಗುಳಿ ಇನ್ನು ನೆನಪು ಮಾತ್ರ.

For Latest News Updates, Join Our Whatsapp Community🚩
RELATED ARTICLES

Most Popular