BREAKING: ಹಾಸ್ಯ ನಟ ಉಮೇಶ್ ವಿಧಿವಶ ಹಿನ್ನೆಲೆ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ನಟ ಉಮೇಶ್ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮೇಶ್ ಇಂದು ಬೆಳಿಗ್ಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹಿರಿಯ ನಟನ ಅಗಲಿಕೆಗೆ ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ. ಉಮೇಶ್ ಅವರ ಪಾರ್ಥಿವಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಕಿದ್ವಾಯಿ ಆಸ್ಪತ್ರೆಯಿಂದ ಜೆ.ಪಿನಗರದಲ್ಲಿರುವ ಅವರ ನಿವಾಸಕ್ಕೆ ತರಲಾಗಿದೆ.

ಬೆಳಿಗ್ಗೆ 11 ಗಂಟೆ ಬಳಿಕ ಪಾರ್ಥಿವ ಶರೀರವನ್ನು ರವೀಂದ್ರ ಕಲಾ ಕ್ಷೇತ್ರದಲ್ಲಿ ಇಡಲಾಗುತ್ತಿದ್ದು, ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read