HomeKarnatakaBREAKING : ನಟ ಯಶ್ ಬರ್ತ್ ಡೇ ಕಟೌಟ್ ಕಟ್ಟುವಾಗ ಮೂವರ ಸಾವು ಪ್ರಕರಣ :...

BREAKING : ನಟ ಯಶ್ ಬರ್ತ್ ಡೇ ಕಟೌಟ್ ಕಟ್ಟುವಾಗ ಮೂವರ ಸಾವು ಪ್ರಕರಣ : ಸರ್ಕಾರದಿಂದ 2 ಲಕ್ಷ ಪರಿಹಾರ ಘೋಷಣೆ

ಗದಗ: ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಘಟನೆ ಸಂಬಂಧ ಮೃತಪಟ್ಟ ಮೂವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿದ ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಸರ್ಕಾರ ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ ಘೋಷಿಸಿದೆ. ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ನೀಡಲಾಗುತ್ತದೆ. ಇಂದು ನಟ ಯಶ್ ಸಂಜೆ 4 ಗಂಟೆಗೆ ಬಂದು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ ಎಂದರು.

ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಹನುಮಂತ ಹರಿಜನ(21), ಮುರಳಿ ನಡುವಿನಮನೆ(20), ನವೀನ್(19) ಮೃತಪಟ್ಟಿದ್ದಾರೆ. ಮಂಜುನಾಥ, ದೀಪಕ್, ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ತಡರಾತ್ರಿ ನೀಲಗಿರಿ ತೋಪಿನಲ್ಲಿ ಯಶ್ ಬರ್ತಡೇ ಬ್ಯಾನರ್ ಕಟ್ಟುವಾಗ ದುರಂತ ಸಂಭವಿಸಿದೆ. ಯಶ್ ಅವರ ಅಭಿಮಾನಿಗಳಾಗಿದ್ದ ಯುವಕರು ನೆಚ್ಚಿನ ನಟನ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಬ್ಯಾನರ್ ಕಟೌಟ್ ಕಟ್ಟಿ ಮೇಲೆತ್ತಿ ನಿಲ್ಲಿಸುವಾಗ ಕರೆಂಟ್ ವೈರ್ ತಗುಲಿ ವಿದ್ಯುತ್ ಪ್ರವಹಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular