HomeKarnatakaBREAKING: ಸೂರಣಗಿಗೆ ಸಾಂತ್ವನ ಹೇಳಲು ಬಂದ ನಟ ಯಶ್ ಪೋಷಕರ ಆಕ್ರಂದನ ಕಂಡು ಭಾವುಕ

BREAKING: ಸೂರಣಗಿಗೆ ಸಾಂತ್ವನ ಹೇಳಲು ಬಂದ ನಟ ಯಶ್ ಪೋಷಕರ ಆಕ್ರಂದನ ಕಂಡು ಭಾವುಕ

ಗದಗ: ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ್ದು, ಮಾಹಿತಿ ತಿಳಿದ ಯಶ್ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಹನುಮಂತ ಹರಿಜನ(21), ಮುರಳಿ ನಡುವಿನಮನೆ(20), ನವೀನ್(19) ಮೃತಪಟ್ಟಿದ್ದಾರೆ. ಮಂಜುನಾಥ, ದೀಪಕ್, ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗೋವಾದಿಂದ ಹುಬ್ಬಳ್ಳಿಗೆ ಆಗಮಿಸಿದ ಯಶ್ ಅಲ್ಲಿಂದ ಸೂರಣಗಿಗೆ ಆಗಮಿಸಿದ್ದು, ಮುರಳಿ, ನವೀನ್, ಹನುಮಂತ ಅವರ ನಿವಾಸಕ್ಕೆ ತೆರಳಿದ ಯಶ್ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಪೋಷಕರ ಕೈಹಿಡಿದುಕೊಂಡು ಸಾಂತ್ವನ ಹೇಳಿದ್ದು, ಮಕ್ಕಳನ್ನು ಕಳೆದುಕೊಂಡ ಕುಟುಂಬದವರ ಕಣ್ಣೀರು ಕಂಡು ಯಶ್ ಭಾವುಕರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಟ್ಟುಹಬ್ಬದ ಸಂಭ್ರಮಾಚರಣೆಗಾಗಿ ಹಲವು ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ದುರಂತ ನಡೆದಿದೆ ಎಂದು ಅಭಿಮಾನಿಗಳು ಯಶ್ ಅವರಿಗೆ ಹೇಳಿದ್ದಾರೆ. ಯಶ್ ಅವರನ್ನು ನೋಡಲು ಅಭಿಮಾನಿಗಳ ನೂಕು ನುಗ್ಗಲು ಉಂಟಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular