BREAKING : ವಿದ್ಯುತ್ ಅವಘಡಕ್ಕೆ ಅಭಿಮಾನಿಗಳು ಬಲಿ : ಇಂದು ಸಂಜೆ 4 ಗಂಟೆಗೆ ಸೂರಣಗಿ ಗ್ರಾಮಕ್ಕೆ ನಟ ಯಶ್ ಭೇಟಿ

ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಈ ಅವಘಡದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ನಟ ರಾಕಿಂಗ್ ಸ್ಟಾರ್ ಯಶ್ ಇಂದು ಸಂಜೆ 4 ಗಂಟೆಗೆ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಗ್ರಾಮಕ್ಕೆ ಭೇಟಿ ನೀಡುವ ನಟ ಯಶ್ ಮೃತ ಯುವಕರ ಕುಟುಂಬದರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಯಶ್ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದರು. ಯಶ್ ಗ್ರಾಮಕ್ಕೆ ಬರಲೇಬೇಕು, ಗಾಯಾಳುಗಳನ್ನು ಹಾಗೂ ಮೃತ ಯುವಕರ ಕುಟುಂಬದವರನ್ನು ಯಶ್ ಭೇಟಿಯಾಗಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದರು.

ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಹನುಮಂತ ಹರಿಜನ(21), ಮುರಳಿ ನಡುವಿನಮನೆ(20), ನವೀನ್(19) ಮೃತಪಟ್ಟಿದ್ದಾರೆ. ಮಂಜುನಾಥ, ದೀಪಕ್, ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read