HomeKarnatakaಕೊಡಗಿನಲ್ಲಿ ಭೀಕರ ಅಪಘಾತ: ನಟ ಹರೀಶ್ ದುರ್ಮರಣ

ಕೊಡಗಿನಲ್ಲಿ ಭೀಕರ ಅಪಘಾತ: ನಟ ಹರೀಶ್ ದುರ್ಮರಣ

ಮಡಿಕೇರಿ: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನ್ನಡ ಕಿರುತೆರೆ ಹಾಗೂ ಸಿನಿಮಾ ನಟ ಹರೀಶ್ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ಈ ದುರಂತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 275ರ ಆನೆಕಾಡು ಬಳಿ ಭೀಕರ ಅಪಘಾತದಲ್ಲಿ ನಟ ಹರೀಶ್ ಸಾವನ್ನಪ್ಪಿದ್ದಾರೆ.

ನಿನ್ನೆ ತಡರಾತ್ರಿ ಕೆಲಸ ಮುಗಿಸಿ ಕುಶಾಲನಗರದಿಂದ ತಮ್ಮ ಸ್ವಗ್ರಾಮಕ್ಕೆ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಹರೀಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹರೀಶ್ ಬಹುಮುಖ ಪ್ರತಿಭೆ. ವೃತ್ತಿಜೀವನದ ಜೊತೆಗೆ ಸಿನಿಮಾ, ಧರಾವಾಹಿಗಳಲ್ಲಿಯೂ ಅಭಿನಯಿಸುತ್ತಿದ್ದರು. ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular