BREAKING: ನಟಿ ಅಮೂಲ್ಯ ಸಹೋದರ ದೀಪಕ್ ನಿಧನ

ಬೆಂಗಳೂರು: ಖ್ಯಾತ ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅರಸ್ ನಿಧನರಾಗಿದ್ದಾರೆ. ‘ಮನಸಾಲಜಿ’, ‘ಶುಗರ್’ ಫ್ಯಾಕ್ಟರಿ ಸಿನಿಮಾಗಳನ್ನು ದೀಪಕ್ ಅರಸ್ ನಿರ್ದೇಶಿಸಿದ್ದಾರೆ.

ಇಂದು ಸಂಜೆ 7 ಗಂಟೆಗೆ ದೀಪಕ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಅನಾರೋಗ್ಯದ ಕಾರಣ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದು, ದೀಪಕ್ ನಿಧನದಿಂದಾಗಿ ಅವರು ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.

ದೀಪಕ್ ಅವರಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆರ್.ಆರ್. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವ ಅವರು ಮೃತಪಟ್ಟಿದ್ದು ವಯಾಲಿಕಾವಲ್ ನಿವಾಸಕ್ಕೆ ಮೃತದೇಹ ತರಲಾಗಿದೆ. ನಾಗಮಂಗಲದಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read