HomeEntertainment30ನೇ ವಸಂತಕ್ಕೆ ಕಾಲಿಟ್ಟ ನಟಿ ಅಮೂಲ್ಯ

30ನೇ ವಸಂತಕ್ಕೆ ಕಾಲಿಟ್ಟ ನಟಿ ಅಮೂಲ್ಯ

Amulya: Boyfriend, Age, Height, Family, Movies, Biography & More

ನಟಿ ಅಮೂಲ್ಯ  ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಕುಟುಂಬದೊಂದಿಗೆ  ಹುಟ್ಟುಹಬ್ಬವನ್ನು  ಸಂಭ್ರಮಿಸಿದ್ದಾರೆ. 2002ರಲ್ಲಿ ತೆರೆಕಂಡ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ‘ಪರ್ವ’ ಸಿನಿಮಾದಲ್ಲಿ ಬಾಲ ಕಲಾವಿದೆಯಾಗಿ ತಮ್ಮ ಸಿನಿ ಪಯಣ ಆರಂಭಿಸಿದ ಅಮೂಲ್ಯ 2003 ರಲ್ಲಿ ಕಿಚ್ಚ ಸುದೀಪ್ ಅವರ ‘ಚಂದು’ ಚಿತ್ರದಲ್ಲಿ ಕಾಣಿಸಿಕೊಂಡರು. ಬಾಲ ನಟಿಯಾಗಿ ಸಾಕಷ್ಟು ಹೆಸರು ಮಾಡಿದ ಅಮೂಲ್ಯ 2007ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ‘ಚೆಲುವಿನ ಚಿತ್ತಾರ’ ದಲ್ಲಿ ಮೊದಲ ಬಾರಿ ನಾಯಕಿಯಾಗಿ ಅಭಿನಯಿಸಿದರು.

ನಟಿ ಅಮೂಲ್ಯ  ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ನ ಬೇಡಿಕೆ ನಟಿಯಾಗಿ ಹೊರಹೊಮ್ಮಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2017ರಲ್ಲಿ ‘ಮುಗುಳುನಗೆ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅಮೂಲ್ಯ ಇತ್ತೀಚಿಗೆ ಸಿನಿಮಾ ರಂಗದಿಂದ ದೂರ ಉಳಿದಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸ್ಯಾಂಡಲ್ವುಡ್ ಸಿನಿ ತಾರೆಯರಿಂದ ಹಾಗೂ ಅವರ ಅಭಿಮಾನಿಗಳಿಂದ ಶುಭಾಶಯಗಳ  ಮಹಾಪೂರವೇ ಹರಿದು ಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular