HomeEntertainmentಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಆಮಿ ಜಾಕ್ಸನ್

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಆಮಿ ಜಾಕ್ಸನ್

ತಮಿಳು, ತೆಲುಗು, ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ವಿದೇಶಿ ಮೂಲದ ನಟಿ ಆಮಿ ಜಾಕ್ಸನ್ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

2010 ರಲ್ಲಿ ತೆರೆಕಂಡ ಎ ಎಲ್ ವಿಜಯ್ ನಿರ್ದೇಶನದ ತಮಿಳಿನ ‘ಮದ್ರಾಸಪಟ್ಟಿನಂ’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು. ಬಳಿಕ 2012 ರಲ್ಲಿ ಹಿಂದಿಯ ‘ಏಕ್ ದೀವಾನಾ ತಾ’ ಸಿನಿಮಾದಲ್ಲಿ ಕಾಣಿಸಿಕೊಂಡರು.

ನಟಿ ಅಮಿ ಜಾಕ್ಸನ್ ಕನ್ನಡದಲ್ಲಿ 2018 ರಂದು ಕಿಚ್ಚ ಸುದೀಪ್ ಹಾಗೂ ಹ್ಯಾಟ್ರಿಕ್ ಹೀರೋ  ಶಿವರಾಜ್ ಕುಮಾರ್ ಅಭಿನಯದ ‘ದಿ ವಿಲನ್’ ನಲ್ಲಿ ನಾಯಕಿಯಾಗಿ ನಟಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚಿಗೆ ತಮಿಳಿನ ‘ಮಿಷನ್ ಚಾಪ್ಟರ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ತಿಂಗಳಲ್ಲಿ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಇಂದು ಸೋಶಿಯಲ್ ಮೀಡಿಯಾದಲ್ಲಿ ಬಾಲಿವುಡ್ ಹಾಗೂ ಕಾಲಿವುಡ್ ಸಿನಿ ತಾರೆಯರು ಆಮಿ ಜಾಕ್ಸನ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ

For Latest News Updates, Join Our Whatsapp Community🚩
RELATED ARTICLES

Most Popular