HomeEntertainmentರಾಣಾ ದಗ್ಗುಬಾಟಿ ಜೊತೆಗಿನ ಫೋಟೋ ಹಂಚಿಕೊಂಡ ನಟಿ ಅನುಷಾ ರೈ

ರಾಣಾ ದಗ್ಗುಬಾಟಿ ಜೊತೆಗಿನ ಫೋಟೋ ಹಂಚಿಕೊಂಡ ನಟಿ ಅನುಷಾ ರೈ

ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಅಭಿಮಾನಿ ನಟಿ ಅನುಷಾ ರೈ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿದ್ದು, ದಿನಕ್ಕೊಂದು ಫೋಟೋ ಅಪ್ಲೋಡ್ ಮಾಡುತ್ತಲೇ ಇರುತ್ತಾರೆ. ಬಾಹುಬಲಿ ಖ್ಯಾತಿಯ ದಗ್ಗುಬಾಟಿ ಫೋಟೋ ತೆಗೆಸಿಕೊಂಡಿದ್ದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿದೆ.

‘ಧೈರ್ಯಂ ಸರ್ವತ್ರ ಸಾಧನಂ’ ‘ಅಬ್ಬಬ್ಬಾ’ ‘ಕಡಕ್’ ಸೇರಿದಂತೆ ಸಾಲು ಸಿನಿಮಾಗಳಲ್ಲಿ ಅಭಿನಯಿಸಿರುವ ಅನುಷಾ ರೈ ತಮ್ಮ ಚಿಕ್ಕ ವಯಸ್ಸಿನಿಂದಲೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಯಾಗಿದ್ದಾರೆ.

ದರ್ಶನ್  ಅವರೊಂದಿಗೆ ನಟಿಸುವ ಅವಕಾಶಕ್ಕಾಗಿ ಕಾಯುತ್ತಿದ್ದೇನೆ ಎಂದು ಇತ್ತೀಚಿಗಷ್ಟೇ ಮಾಧ್ಯಮ ಒಂದರಲ್ಲಿ ತಿಳಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular