HomeEntertainment43ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಷ್ಕಾ ಶೆಟ್ಟಿ

43ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಷ್ಕಾ ಶೆಟ್ಟಿ

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಇಂದು 43ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳು ಮಹಾಪೂರವೇ ಹರಿದು ಬಂದಿದೆ.

2005ರಲ್ಲಿ ತೆರೆಕಂಡ ನಾಗಾರ್ಜುನ ನಟನೆಯ ‘ಸೂಪರ್’ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದ ಇವರು ಬಳಿಕ ‘ಮಹಾನಂದಿ’ ‘ಅಸ್ತ್ರಮ್’ ‘ವಿಕ್ರಮಾರ್ಕುಡು’ ಸೇರಿದಂತೆ  ಬ್ಯಾಕ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುವ ಮೂಲಕ ಜನಪ್ರಿಯ ನಟಿಯಾಗಿ ಹೊರಹೊಮ್ಮಿದರು.

ನಟಿ ಅನುಷ್ಕಾ ಶೆಟ್ಟಿ 2007 ರಂದು ಸುಂದರ್ ನಿರ್ದೇಶನದ ‘ರೆಂದು’  ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಳೆದ ವರ್ಷ ‘ಮಿಸ್ ಶೆಟ್ಟಿ ಶ್ರೀ ಪೋಲಿಶೆಟ್ಟಿ’ ನಲ್ಲಿ ಕಾಣಿಸಿಕೊಂಡಿದ್ದ ಇವರು ಇತ್ತೀಚಿಗೆ ‘ಘಾಟಿ’ ಹಾಗೂ ‘ಕಥನಾರ್ – ದಿ ವೈಲ್ಡ್ ಸೋರ್ಸೆರರ್’   ಶೂಟಿಂಗಲ್ಲಿ ಬಿಜಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular