HomeEntertainmentUPDATE : 'ಸ್ಮಾರ್ತ ಬ್ರಾಹ್ಮಣ' ಸಂಪ್ರದಾಯದಂತೆ ಇಂದು ನಟಿ, ನಿರೂಪಕಿ ಅಪರ್ಣಾ ಅಂತ್ಯಕ್ರಿಯೆ.!

UPDATE : ‘ಸ್ಮಾರ್ತ ಬ್ರಾಹ್ಮಣ’ ಸಂಪ್ರದಾಯದಂತೆ ಇಂದು ನಟಿ, ನಿರೂಪಕಿ ಅಪರ್ಣಾ ಅಂತ್ಯಕ್ರಿಯೆ.!

ಬೆಂಗಳೂರು : ಖ್ಯಾತ ನಟಿ, ನಿರೂಪಕಿ ಅಪರ್ಣಾ (51) ವಿಧಿವಶರಾಗಿದ್ದು, ಇಂದು ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ.

ಬನಶಂಕರಿ ನಿವಾಸದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ ಹಲವು ನಟ ನಟಿಯರು ಅಂತಿಮ ದರ್ಶನ ಪಡೆದಿದ್ದಾರೆ.

ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ನಿರೂಪಕಿ ಅಪರ್ಣಾ ಅಂತ್ಯಕ್ರಿಯೆ ನೆರವೇರಲಿದೆ.ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಮನೆಗೆ ಮರಳಿದ್ದ ಅವರು ಬನಶಂಕರಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ಅಪರ್ಣ ಅವರು 1984ರಲ್ಲಿ ತೆರೆಕಂಡ ‘ಮಸಣದ ಹೂವು’, ‘ಇನ್ಸ್ಪೆಕ್ಟರ್ ವಿಕ್ರಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದರು. ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular