HomeEntertainment28ನೇ ವಸಂತಕ್ಕೆ ಕಾಲಿಟ್ಟ ನಟಿ ಆಶಿಕಾ ರಂಗನಾಥ್

28ನೇ ವಸಂತಕ್ಕೆ ಕಾಲಿಟ್ಟ ನಟಿ ಆಶಿಕಾ ರಂಗನಾಥ್

ಕನ್ನಡ ಹಾಗು ತೆಲುಗು ಚಿತ್ರರಂಗದ ಜನಪ್ರಿಯ ನಟಿ ಆಶಿಕಾ ರಂಗನಾಥ್ ಇಂದು 28ನೇ ವಸಂತಕ್ಕೆ ಕಾಲಿಟ್ಟಿದ್ದು ತಮ್ಮ ಗೆಳತಿಯರೊಂದಿಗೆ ಹುಟ್ಟು ಹಬ್ಬವನ್ನು ಸರಳವಾಗಿ ಸೆಲೆಬ್ರೇಟ್ ಮಾಡಿದ್ದಾರೆ.

2016ರಲ್ಲಿ ತೆರೆ ಕಂಡ ದಿಲೀಪ್ ಪ್ರಕಾಶ್ ಅಭಿನಯದ ‘ಕ್ರೇಜಿಬಾಯ್’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಇವರು 2017 ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಮಾಸ್ ಲೀಡರ್’ ನಲ್ಲಿ ಶ್ರೇಯ ಪಾತ್ರದಲ್ಲಿ ಕಾಣಿಸಿಕೊಂಡರು. ಬಳಿಕ ‘ಮುಗುಳುನಗೆ’ ‘ರಾಜು ಕನ್ನಡ ಮೀಡಿಯಂ’  ‘ರಾಂಬೊ2’ ‘ತಾಯಿಗೆ ತಕ್ಕ ಮಗ’ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗದ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು.

ನಟಿ ಆಶಿಕಾ ರಂಗನಾಥ್ ಅಭಿನಯದ ‘o2’ ಚಿತ್ರ ಇತ್ತೀಚಿಗಷ್ಟೇ ಬಿಡುಗಡೆಯಾಗಿ ಸೂಪರ್ ಡೂಪರ್ ಹಿಟ್ ಆಗಿದ್ದು, ತಮಿಳಿನ ‘ಮಿಸ್ ಯು’ ಹಾಗೂ ತೆಲುಗಿನ ‘ವಿಶ್ವಂಭರ’  ಶೂಟಿಂಗ್ನಲ್ಲಿ ಬಿಜಿಯಾಗಿದ್ದಾರೆ. ‘ಗತವೈಭವ’  ಸಿನಿಮಾ ಶೂಟಿಂಗ್ ಕಂಪ್ಲೀಟ್ ಆಗಿದ್ದು,  ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular