HomeEntertainment34ನೇ ವಸಂತಕ್ಕೆ ಕಾಲಿಟ್ಟ ನಟಿ ಹರ್ಷಿಕಾ ಪೂಣಚ್ಚ

34ನೇ ವಸಂತಕ್ಕೆ ಕಾಲಿಟ್ಟ ನಟಿ ಹರ್ಷಿಕಾ ಪೂಣಚ್ಚ

ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ನಾಯಕನಟಿಯಾಗಿ ಮತ್ತು ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಹೆಸರು ಮಾಡಿರುವ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

2008ರಲ್ಲಿ ತೆರೆ ಕಂಡ ‘ಪಿಯುಸಿ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಇವರು 2009ರಂದು ‘ಪೊನ್ನಮ್ಮ’ ಸಿನಿಮಾದಲ್ಲಿ ಅಭಿನಯಿಸಿದರು.

2010ರಲ್ಲಿ ‘ತಮಸ್ಸು’ ಎಂಬ ಕನ್ನಡ ಚಿತ್ರದಲ್ಲಿ ಅಭಿನಯಿಸಿದ್ದ ಇವರಿಗೆ ಕರ್ನಾಟಕ ಸ್ಟೇಟ್ ಫಿಲಂ ಅವಾರ್ಡ್ ಬೆಸ್ಟ್ ಸಪೋರ್ಟಿಂಗ್ ಆಕ್ಟರ್ ಪ್ರಶಸ್ತಿ  ದೊರೆಯಿತು. ಬಳಿಕ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಮತ್ತು ಭೋಜಪುರಿ ಚಿತ್ರರಂಗದಲ್ಲಿ ತೆರೆ ಹಂಚಿಕೊಂಡರು. ಇತ್ತೀಚಿಗೆ ‘ಉನ್ ಕಾದಲ್ ಇರುಂಧಲ್’ ಎಂಬ ತಮಿಳು ಸಿನಿಮಾ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular