HomeEntertainmentಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಕಾಜಲ್ ಅಗರ್ವಾಲ್

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಕಾಜಲ್ ಅಗರ್ವಾಲ್

ತೆಲುಗು ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟಿ ಕಾಜಲ್ ಅಗರ್ವಾಲ್ ಇಂದು ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

2004ರಲ್ಲಿ ತೆರೆಕಂಡ ‘ಕ್ಯುನ್ ಹೋ ಗಯಾ ನಾ’ ಎಂಬ ಹಿಂದಿ ಚಿತ್ರದಲ್ಲಿ ಐಶ್ವರ್ಯ ರೈ ತಂಗಿಯ ಪಾತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು. ಬಳಿಕ ತೆಲುಗಿನ ‘ಲಕ್ಷ್ಮಿ ಕಲ್ಯಾಣಂ’ ಸಿನಿಮಾದಲ್ಲಿ ನಾಯಕಿಯಾಗಿ  ಕಾಣಿಸಿಕೊಂಡರು. ‘ಡಾರ್ಲಿಂಗ್’  ‘ಮಿಸ್ಟರ್ ಪರ್ಫೆಕ್ಟ್’ ‘ಬಿಸಿನೆಸ್ ಮ್ಯಾನ್’ ‘ಬಾದ್ಷಾ’ ಹೀಗೆ ಸಾಲು ಸಾಲು ಸಿನಿಮಾ ಗಳಲ್ಲಿ ಅಭಿನಯಿಸುವ ಮೂಲಕ ಟಾಲಿವುಡ್ ನ ಬೇಡಿಕೆಯ ನಟಿಯಾದರ

ನಟಿ ಕಾಜಲ್ ಅಗರ್ವಾಲ್  ಇತ್ತೀಚಿಗೆ  ‘ಕಣ್ಣಪ್ಪ’ ಚಿತ್ರದಲ್ಲಿ ಅತಿಥಿ ಪಾತ್ರ ಒಂದರಲ್ಲಿ ಕಾಣಿಸಿಕೊಳ್ಳಲಿದ್ದು, ‘ಉಮಾ’ ಹಾಗೂ ಇಂಡಿಯನ್ 3 ಶೂಟಿಂಗ್ನಲ್ಲಿ ನಿರತರಾಗಿದ್ದಾರೆ ಇಂದು ಸೋಶಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳು ಮಹಾಪೂರವೇ ಹರಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular