HomeEntertainmentಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಕತ್ರಿನಾ ಕೈಫ್

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಕತ್ರಿನಾ ಕೈಫ್

ಬಾಲಿವುಡ್ ಚಿತ್ರರಂಗದ ಬೇಡಿಕೆಯ ನಟಿ ಕತ್ರಿನಾ ಕೈಫ್ ಇಂದು ತಮ್ಮ 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

2003ರಲ್ಲಿ ತೆರೆಕಂಡ ಅಮಿತಾ ಬಚ್ಚನ್ ನಟನೆಯ ‘ಬೂಮ್’ ಚಿತ್ರದ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದ ಇವರು 2004 ರಲ್ಲಿ ತೆಲುಗಿನ ‘ಮಲ್ಲಿಶ್ವರಿ’  ಯಲ್ಲಿ ತೆರೆ ಹಂಚಿಕೊಂಡರು. ನಟಿ ಕತ್ರಿನಾ ಕೈಫ್ ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದಾರೆ.

ಕತ್ರಿನಾ ಕೈಫ್ ಅತಿಥಿ ಪಾತ್ರಗಳಲ್ಲೂ ಹೆಚ್ಚಾಗಿ ಕಾಣಿಸಿಕೊಂಡಿದ್ದು, ವರ್ಷಕ್ಕೆ ಒಂದು ಅಥವಾ ಎರಡು ಚಿತ್ರಗಳಲ್ಲಿ ಅಭಿನಯಿಸುತ್ತಾರೆ. ಕಳೆದ ವರ್ಷ ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ನಲ್ಲಿ ನಾಯಕಿಯಾಗಿದ್ದ  ಇವರು  ಇವರು ಇತ್ತೀಚಿಗೆ ವಿಜಯ್ ಸೇತುಪತಿ ಜೊತೆ ‘ಮೇರಿ ಕ್ರಿಸ್ಮಸ್’ ಎಂಬ ತಮಿಳು ಸಿನಿಮಾದಲ್ಲಿ ಅಭಿನಯಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಸಾಮಾಜಿಕ ಜಾಲತಾಣದಲ್ಲಿ ಬಾಲಿವುಡ್ ನ ನಟ ನಟಿಯರು ಕತ್ರಿನಾ ಕೈಫ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ. ಮೊನ್ನೆಯಷ್ಟೇ ಕತ್ರಿನಾ ಕೈಫ್ ಮಂಗಳೂರಿಗೆ ಆಗಮಿಸುವ ಮೂಲಕ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular