HomeEntertainment21ನೇ ವಸಂತಕ್ಕೆ ಕಾಲಿಟ್ಟ ನಟಿ ಕೃತಿ ಶೆಟ್ಟಿ

21ನೇ ವಸಂತಕ್ಕೆ ಕಾಲಿಟ್ಟ ನಟಿ ಕೃತಿ ಶೆಟ್ಟಿ

ತೆಲುಗು ಹಾಗು ತಮಿಳು ಚಿತ್ರರಂಗದ ಬಹು ಬೇಡಿಕೆಯ ನಟಿ ಇಂದು ತಮ್ಮ 21ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.

2019ರಲ್ಲಿ ತೆರೆ ಕಂಡ ಹೃತಿಕ್ ರೋಷನ್ ನಟನೆಯ ‘ಸೂಪರ್ 30’ ಚಿತ್ರದಲ್ಲಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು. 2021 ರಲ್ಲಿ ತೆಲುಗಿನ ‘ಉಪ್ಪೆನಾ’ ದಲ್ಲಿ ಮೊದಲ ಬಾರಿ ನಾಯಕಿಯಾಗಿ ಕಾಣಿಸಿಕೊಂಡರು. ಕಡಿಮೆ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಈ ಚಿತ್ರ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ ಟಾಲಿವುಡ್ ನಲ್ಲಿ ಹೊಸ ದಾಖಲೆ  ಬರೆಯಿತು.

ನಟಿ ಕೃತಿ ಶೆಟ್ಟಿ ತೆಲುಗು ಮಾತ್ರವಲ್ಲದೆ ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ನಾಯಕಿಯಾಗಿ ಅಭಿನಯಿಸಿದ್ದು, ಇತ್ತೀಚಿಗೆ ತಮಿಳಿನ ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ‘ವಾ ವಾಥಿಯಾರ್’ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ‘ಲವ್ ಇನ್ಶೂರೆನ್ಸ್ ಕಂಪನಿ’ ಹಾಗೂ ‘ಜಿನೀ’ ಚಿತ್ರದ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಸಿನಿ ತಾರೆಯರು ಕೃತಿ ಶೆಟ್ಟಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular