ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಲಾವಣ್ಯ ತ್ರಿಪಾಠಿ

ಲಾವಣ್ಯ ತ್ರಿಪಾಠಿ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2012ರಲ್ಲಿ ತೆರೆಕಂಡ ಅಂದಾಲ ರಾಕ್ಷಸಿ ಎಂಬ ತೆಲುಗು ಚಿತ್ರದ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದರು. 2014 ರಲ್ಲಿ ತಮಿಳಿ‌ನ ‘ಬ್ರಮ್ಮನ್’ ಸಿನಿಮಾದಲ್ಲಿ ಅಭಿನಯಿಸಿದರು. ಲಾವಣ್ಯ ತ್ರಿಪಾಠಿ ತೆಲುಗು ಹಾಗು ತಮಿಳು ಚಿತ್ರರಂಗದ ಬೇಡಿಕೆ ನಟಿಯಾಗಿದ್ದಾರೆ.

ಲಾವಣ್ಯ ತ್ರಿಪಾಠಿ  ಫೋಟೋ ಶೂಟಿಂಗ್ ಗೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ. ತಮ್ಮ ಫೋಟೋಗಳನ್ನು ಹಾಗೂ ಸಿನಿಮಾ ಸಂಬಂಧಿಸಿದ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ.

ಕಳೆದ ವರ್ಷ ಹ್ಯಾಪಿ ಬರ್ತಡೆ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದ ಇವರು ತನಲ್ ಸಿನಿಮಾ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

https://twitter.com/SVCCofficial/status/1735490941656637593?ref_src=twsrc%5Egoogle%7Ctwcamp%5Eserp%7Ctwgr%5Etweet

https://twitter.com/telugufilmnagar/status/1735502896152936549?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read