47 ನೇ ವಸಂತಕ್ಕೆ ಕಾಲಿಟ್ಟ ನಟಿ ಮೀನಾ

I loved that actor, I was heartbroken on his wedding day', reveals actor Meena - CINEMA - CINE NEWS | Kerala Kaumudi Online

ಖ್ಯಾತ  ಬಹುಭಾಷಾ ನಟಿ ಮೀನಾ ಇಂದು ತಮ್ಮ 47ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಸುಂದರ್ ರಾಜನ್ ನಿರ್ದೇಶನದ ‘ನಿಂಜಂಗಲ್’ ಎಂಬ ತಮಿಳು ಚಿತ್ರದಲ್ಲಿ ಬಾಲ ನಟಿಯಾಗಿ ಒಂದು ಸಣ್ಣ ಪಾತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು.

ಸುಮಾರು ಐದು ವರ್ಷಗಳ ಕಾಲ ಬಾಲ ಕಲಾವಿದೆಯಾಗಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. 1990ರಲ್ಲಿ ‘ನವಯುಗ’ ಸಿನಿಮಾದಲ್ಲಿ ಮೊದಲ ಬಾರಿ ನಾಯಕಿಯಾಗಿ ಕಾಣಿಸಿಕೊಂಡರು. ನಂತರ ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದ ಬೇಡಿಕೆಯ ನಟಿಯಾದರು.

1995 ರಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ‘ಪುಟ್ನಂಜ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಟಿ ಮೀನ ಇತ್ತೀಚಿಗೆ ‘ರೌಡಿ ಬೇಬಿ’ ಎಂಬ ತಮಿಳು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಭಾಷೆಯ ಸಿನಿ ತಾರೆಯರು ಇವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read