ವಿಶ್ವವಿಖ್ಯಾತ ಹಂಪಿಯಲ್ಲಿ ಸರಳ ಉತ್ಸವ ಆರಂಭವಾಗಿದ್ದು, ಶುಕ್ರವಾರ ರಾತ್ರಿ 8 ಗಂಟೆಗೆ ಸಿಎಂ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಂಪಿ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.
ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ಉತ್ಸವದ ಪ್ರಮುಖ ಆಕರ್ಷಣೆಯಾಗಿದ್ದು, ಈ ಬಾರಿ ನಟಿ ನಿಮಿಕಾ ರತ್ನಾಕರ್ ವೇದಿಕೆಯಲ್ಲಿ ಡ್ಯಾನ್ಸ್ ಮಾಡಲಿದ್ದಾರೆ. ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್ ಹಂಪಿ ಉತ್ಸವದಲ್ಲಿ ನೃತ್ಯ ಮಾಡಲಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಶೇಕ್ ಇಟ್ ಪುಷ್ಪವತಿ ಹಾಡಿಗೆ ಡ್ಯಾನ್ಸ್ ಮಾಡಿರುವ ನಟಿ ಹಂಪಿಯಲ್ಲಿ ನೃತ್ಯ ಮಾಡಲಿದ್ದಾರೆ. ಈ ಹಿಂದೆ ನಿಮಿಕಾ ದಸರಾ ಉತ್ಸವದಲ್ಲಿಯೂ ಭಾಗಿಯಾಗಿದ್ದರು, ಈ ಬಾರಿ ಹಂಪಿ ಉತ್ಸವದಲ್ಲಿ ಭಾಗಿಯಾಗುವ ಅವಕಾಶ ಸಿಕ್ಕಿದೆ.
https://twitter.com/siddaramaiah/status/1752933714852749725?ref_src=twsrc%5Etfw%7Ctwcamp%5Etweetembed%7Ctwterm%5E1752933714852749725%7Ctwgr%5Eccba52a8689875f5685e0ad90c321f31004f57bc%7Ctwcon%5Es1_&ref_url=https%3A%2F%2Fkannada.oneindia.com%2Fnews%2Fbengaluru%2Fhampi-utsav-2024-to-commence-from-tomorrow-cm-siddaramaiah-calls-kannadigas-for-a-grand-celebration-341157.html