ಕನ್ನಡ, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟಿ ಪಾರುಲ್ ಯಾದವ್ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ಆಕ್ಟಿವ್ ಆಗಿರುತ್ತಾರೆ. ಸಿನಿಮಾ, ಕ್ರಿಕೆಟ್, ಸಂಬಂಧಿತ ವಿಚಾರ ಸೇರಿದಂತೆ ತಮ್ಮ ವರ್ಕೌಟ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಪಾರುಲ್ ಯಾದವ್ ಇತ್ತೀಚಿಗಷ್ಟೇ ಫೋಟೋಗೆ ಪೋಸ್ ನೀಡಿದ್ದು, ಈ ಫೋಟೋಗಳನ್ನು ತಮ್ಮ instagram ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿದೆ.
ಸಿನಿಮಾ ವಿಚಾರಕ್ಕೆ ಬಂದರೆ ತಮಿಳಿನ ‘ಡ್ರೀಮ್ಸ್’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಇವರು ಕನ್ನಡ ಚಿತ್ರರಂಗದಲ್ಲೇ ಹೆಚ್ಚಾಗಿ ನಟಿಸಿದ್ದಾರೆ. 2018ರಲ್ಲಿ ಕೊನೆಯದಾಗಿ ‘ಸೀಜರ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಪಾರುಲ್ ಯಾದವ್ ಇತ್ತೀಚಿಗೆ ಬಟರ್ಫ್ಲೈ ಶೂಟಿಂಗ್ನಲ್ಲಿ ನಿರತರಾಗಿದ್ದಾರೆ.