HomeEntertainment40ನೇ ವಸಂತಕ್ಕೆ ಕಾಲಿಟ್ಟ ನಟಿ ಪೂಜಾ ಗಾಂಧಿ

40ನೇ ವಸಂತಕ್ಕೆ ಕಾಲಿಟ್ಟ ನಟಿ ಪೂಜಾ ಗಾಂಧಿ

ನಟಿ ಪೂಜಾ ಗಾಂಧಿ ಇಂದು ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2001ರಲ್ಲಿ ತೆರೆಕಂಡ ‘ಖತ್ರೋನ್ ಕೆ ಖಿಲಾಡಿ‘ ಎಂಬ ಹಿಂದಿ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಹಲವಾರು ಭಾಷೆಗಳಲ್ಲಿ ತೆರೆ ಹಂಚಿಕೊಂಡಿದ್ದಾರೆ.

ಕನ್ನಡದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ‘ಮುಂಗಾರು ಮಳೆ’ ಚಿತ್ರದಲ್ಲಿ ಅಭಿನಯಿಸಿದರು. ಈ ಸಿನಿಮಾ ಒಂದು ವರ್ಷ ಪ್ರದರ್ಶನ ಕಾಣುವ ಮೂಲಕ ಬಾಕ್ಸ್ ಆಫೀಸ್ ಧೂಳ್ ಎಬ್ಬಿಸಿ ಹೊಸ ದಾಖಲೆ ಬರೆದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟಿ ಪೂಜಾ ಗಾಂಧಿ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ ಬೆಂಗಾಲಿ, ಚಿತ್ರರಂಗದಲ್ಲಿ ಅಭಿನಯಿಸಿದ್ದಾರೆ. ‘ದಂಡುಪಾಳ್ಯ’ ಚಿತ್ರದ ಮೂರು ಭಾಗಗಳಲ್ಲೂ ಕಾಣಿಸಿಕೊಂಡಿದ್ದ ಪೂಜಾ ಗಾಂಧಿ ಇತ್ತೀಚೆಗೆ ‘ಸಂಹಾರಿಣಿ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular