ನಟಿ ಪ್ರಿಯಾಂಕ ಜಾವಲ್ಕರ್ ಟಾಲಿವುಡ್ ನಲ್ಲಿ ಬೆರಳೆಣಿಕೆಯಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರೂ, ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ, ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿದ್ದಾರೆ. ತಮ್ಮ ಬೋಲ್ಡ್ ಅವತಾರಗಳಿಂದಲೇ ಸದಾ ಸುದ್ದಿಯಲ್ಲಿರುವ ಪ್ರಿಯಾಂಕ ಜಾವಲ್ಕರ್ ಇತ್ತೀಚಿಗಷ್ಟೇ ಫೋಟೋಶೂಟ್ ಮಾಡಿಸಿದ್ದು, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ನೆಟ್ಟಿಗರಿಂದ ಈ ಫೋಟೋಗಳಿಗೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
ಸಿನಿಮಾ ವಿಚಾರಕ್ಕೆ ಬಂದರೆ 2017ರಲ್ಲಿ ತೆರೆಕಂಡ ‘ಕಾಲಾ ವರಮ್ ಆಯೇ ‘ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಇವರು 2018 ರಂದು ವಿಜಯ್ ದೇವರಕೊಂಡ ನಟನೆಯ ‘ಟ್ಯಾಕ್ಸಿವಾಲಾ’ ದಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು. ಇತ್ತೀಚಿಗಷ್ಟೇ ‘ಟಿಲ್ಲು ಸ್ಕ್ವಯರ್’ ನಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.