ಬೆಂಗಳೂರು : ಮದುವೆ ಬಗ್ಗೆ ಅಭಿಮಾನಿಗಳಿಗೆ ನಟಿ ರಚಿತಾ ರಾಮ್ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಚಿತಾ ರಾಮ್ ‘ ಹುಡುಗ ಹಾಗಿರಬೇಕು, ಹೀಗಿರಬೇಕು ಅಂತೇನಿಲ್ಲ. ಮನೆಯಲ್ಲಿ ಹುಡುಗನನ್ನು ಹುಡುಕುತ್ತಿದ್ದಾರೆ. ಒಳ್ಳೆ ಹುಡುಗ ಸಿಕ್ಕರೆ ಮದುವೆ ಆಗುತ್ತೀನಿ ಎಂಬ ಸುಳಿವು ನೀಡಿದ್ದಾರೆ.
ಅಂದಹಾಗೆ ಇಂದು ರಚಿತಾ ರಾಮ್ ಹುಟ್ಟುಹಬ್ಬ. ಅವರು 33 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ದಿನವೇ ಅಭಿಮಾನಿಗಳಿಗೆ ರಚ್ಚು ಗುಡ್ ನ್ಯೂಸ್ ನೀಡಿದ್ದಾರೆ. ರಚಿತಾ ರಾಮ್ ಸದ್ಯ ಅಯೋಗ್ಯ-2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅಲ್ಲದೇ ಇತ್ತೀಚೆಗೆ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕೂಲಿ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ.