HomeEntertainmentಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಾಗಿಣಿ ದ್ವಿವೇದಿ

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಾಗಿಣಿ ದ್ವಿವೇದಿ

ಸ್ಯಾಂಡಲ್ ವುಡ್ ನಲ್ಲಿ ಇತ್ತೀಚಿಗೆ ತಮ್ಮ ಬೋಲ್ಡ್ ಪಾತ್ರಗಳ ಮೂಲಕವೇ ಸಾಕಷ್ಟು ಸುದ್ದಿಯಲ್ಲಿರುವ ನಟಿ ರಾಗಿಣಿ ದ್ವಿವೇದಿ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

2009ರಲ್ಲಿ ತೆರೆ ಕಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ‘ವೀರ ಮದಕರಿ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುವ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದರು. ಬಳಿಕ ಅದೇ ವರ್ಷದಲ್ಲಿ ವಿಜಯ್ ರಾಘವೇಂದ್ರ ಅವರ ‘ಗೋಕುಲ’ ಸಿನಿಮಾದ ಐಟಂ ಹಾಡೊಂದರಲ್ಲಿ ಕಾಣಿಸಿಕೊಂಡರು. 2011ರಲ್ಲಿ ‘ಕೆಂಪೇಗೌಡ’  ದಲ್ಲಿ ಕಿಚ್ಚ ಸುದೀಪ್ ಜೊತೆ ಮತ್ತೊಮ್ಮೆ  ತೆರೆ ಹಂಚಿಕೊಂಡ ಇವರಿಗೆ ಬೆಸ್ಟ್ ಆಕ್ಟ್ರೆಸ್ಸ್ ಕನ್ನಡ ಎಂಬ ಫಿಲಂ ಫೇರ್ ಪ್ರಶಸ್ತಿ ದೊರೆಯಿತು. ನಟಿ ರಾಗಿಣಿ ಇತ್ತೀಚಿಗೆ  ಐಟಂ   ಹಾಡುಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ‘ವೃಷಭ’ ಮತ್ತು ‘ಸಾರಿ ಕರ್ಮ ರಿಟರ್ನ್ಸ್’ ಸಿನಿಮಾ ಶೂಟಿಂಗಲ್ಲಿ ಬಿಜಿಯಾಗಿದ್ದಾರೆ.

ಡ್ರಕ್ಸ್ ದಂಧೆ ಪ್ರಕರಣದಿಂದ ಸಾಕಷ್ಟು ಸುದ್ದಿಯಾಗಿದ್ದ ಇವರು  ಇವೆಲ್ಲವನ್ನು ಮರೆತು ಇದೀಗ ಮತ್ತೊಮ್ಮೆ ಸಿನಿಮಾ  ಚಟುವಟಿಕೆಯಲ್ಲಿ ತೊಡಗಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular