ಬೆಂಗಳೂರು : ನಟಿ ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಿಸಿದಂತೆ ರಾಜ್ಯದ 16 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರನ್ಯಾರಾವ್ ಆರ್ಥಿಕ ವ್ಯವಹಾರಗಳ ಕುರಿತು ತನಿಖೆ ಕೈಗೊಂಡಿರುವ ಇಡಿ ಅಧಿಕಾರಿಗಳು ಆಕೆಗೆ ಸಂಬಂಧಿಸಿದ ವ್ಯಕ್ತಿ ಹಾಗೂ ವಿವಿಧ 16 ಸ್ಥಳಗಳ ಮೇಲೆ ಧಿಡೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಕೂಡ ವಶಕ್ಕೆ ಪಡೆದಿದ್ದಾರೆ.
ಹವಾಲಾ ದಂಧೆ ನಡೆಸುವವರು ಚಿನ್ನ ಖರೀದಿಗಾಗಿ ಅಕ್ರಮ ವಿದೇಶಿ ವಿನಿಮಯ ಸಾಗಣೆಗೆ ಅನುಕೂಲ ಮಾಡಿಕೊಟ್ಟಿರುವುದು ತಿಳಿದುಬಂದಿದೆ ರನ್ಯಾರಾವ್ರಿಂದ ಚಿನ್ನ ಖರೀದಿಸಿ ಆಭರಣ ವ್ಯಾಪಾರಿಗಳಿಗೆ ಮಾರಾಟ ಮಾಡಿರುವುದು ಬಯಲಾಗಿದೆ . ರನ್ಯಾರಾವ್ ಖಾತೆಗಳಿಗೆ ನಕಲಿ ಹಣಕಾಸು ವಹಿವಾಟು ಮೂಲಕ ಹಣ ಸಂದಾಯವಾಗಿದೆ. ಹಲವು ಕಂಪನಿಗಳ ಮೂಲಕ ಹಣ ವರ್ಗಾವಣೆಯಾಗಿದೆ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ವಿನಿಮಯ ವ್ಯವಹಾರ ನಡೆಸುತ್ತಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳು ಪತ್ತೆಯಾಗಿವೆ.
TAGGED:ಗೋಲ್ಡ್ ಸ್ಮಗ್ಲಿಂಗ್ ಕೇಸ್