ಸ್ಯಾಂಡಲ್ ವುಡ್ ನ ಬಹು ಬೇಡಿಕೆಯ ನಟಿಯಾಗಿರುವ ರೀಷ್ಮಾ ನಾಣಯ್ಯ ಸೋಶಿಯಲ್ ಮೀಡಿಯಾಲ್ಲೂ ಫುಲ್ ಬಿಜಿಯಾಗಿರುತ್ತಾರೆ. ಇತ್ತೀಚಿಗಷ್ಟೇ ಫೋಟೋಶೂಟ್ ಮಾಡಿಸಿದ್ದು, ತಮ್ಮ instagram ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ರೀಷ್ಮಾ ನಾಣಯ್ಯ ಗ್ಲಾಮರಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಹರಿದುಬಂದಿವೆ. ಗಾರ್ಜಿಯಸ್, ಬ್ಯೂಟಿಫುಲ್, ಹೀಗೆ ಬಗೆ ಬಗೆಯ ಕಮೆಂಟ್ಸ್ ಗಳನ್ನು ಮಾಡಿದ್ದಾರೆ.
ನಟಿ ರೀಷ್ಮಾ ನಾಣಯ್ಯ ಇತ್ತೀಚಿಗಷ್ಟೇ ರಿಯಲ್ ಸ್ಟಾರ್ ಉಪೇಂದ್ರ ಜೊತೆ ‘ui’ ಚಿತ್ರದಲ್ಲಿ ಅಭಿನಯಿಸಿದ ಬಳಿಕ ಭರ್ಜರಿ ಯಶಸ್ಸು ಕಂಡಿದ್ದು, ಇದರ ಬೆನ್ನಲ್ಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮವಾದ ‘ಕೆಡಿ – ದಿ ಡೆವಿಲ್’ ನಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ.