HomeLatest NewsBREAKING :'ಕಾಂತಾರ- 1' ಚಿತ್ರದಲ್ಲಿ ನಟ ರಿಷಬ್ ಶೆಟ್ಟಿಗೆ ಜೋಡಿಯಾದ ನಟಿ ರುಕ್ಮಿಣಿ ವಸಂತ್ :...

BREAKING :’ಕಾಂತಾರ- 1′ ಚಿತ್ರದಲ್ಲಿ ನಟ ರಿಷಬ್ ಶೆಟ್ಟಿಗೆ ಜೋಡಿಯಾದ ನಟಿ ರುಕ್ಮಿಣಿ ವಸಂತ್ : ‘ಕನಕವತಿ’ ಫಸ್ಟ್ ಲುಕ್ ರಿಲೀಸ್.!

ಬೆಂಗಳೂರು : ಕಾಂತಾರ ಚಾಪ್ಟರ್ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್ 2 ರಂದು ತೆರೆಗೆ ಬರಲಿದೆ. ಸದ್ಯ ಸಿನಿಮಾದ ಅಪ್ ಡೇಟ್ ಅಂದರೆ ಈ ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ರುಕ್ಮಿಣಿ ವಸಂತ್ ಜೋಡಿಯಾಗಿದ್ದು, ಕನಕವತಿ ಪೋಸ್ಟರ್ ರಿಲೀಸ್ ಆಗಿದೆ.

ಹೌದು, ವರಮಹಾಲಕ್ಷ್ಮೀ ಹಬ್ಬದ ವ್ರತದ ದಿನವೇ ಕನಕವತಿ ಪೋಸ್ಟರ್ ರಿಲೀಸ್ ಆಗಿದೆ. ಕಾಂತಾರ-1 ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ನಟಿಸುತ್ತಿದ್ದು, ಸದ್ಯ ಚಿತ್ರತಂಡ ಕನಕವತಿ ಪೋಸ್ಟರ್ ರಿಲೀಸ್ ಮಾಡಿದೆ.

ಕಾಂತಾರ Chapter-1 ಕನಕವತಿಯ ಪರಿಚಯ ನಿಮ್ಮ ಮುಂದೆ… Introducing @rukminitweetsas ‘KANAKAVATHI’ from the world of #KantaraChapter1 ಎಂದು ನಟ ರಿಷಬ್ ಶೆಟ್ಟಿ ಪೋಸ್ಟ್ ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ‘ಕಾಂತಾರ ಅಧ್ಯಾಯ 1’ ಚಿತ್ರ 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ.ಅ. 2 ರಂದು ಏಳು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ‘ಕಾಂತಾರ’ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡಿತ್ತು. ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟಿದೆ. ಇದೀಗ ಕಾಂತಾರ ಚಾಪ್ಟರ್ 1 ತೆರೆ ಮೇಲೆ ಬರಲು ಸಜ್ಜಾಗುತ್ತಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಇಂಗ್ಲೀಷ್ ಹಾಗೂ ಬೆಂಗಾಲಿ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular