33ನೇ ವಸಂತಕ್ಕೆ ಕಾಲಿಟ್ಟ ನಟಿ ಸಂಯುಕ್ತ ಹೊರನಾಡ್

ಕನ್ನಡ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ನಾಯಕ ನಟಿಯಾಗಿ ಮತ್ತು ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿರುವ ಸುಧಾ ಬೆಳವಾಡಿ ಅವರ ಪುತ್ರಿ ನಟಿ ಸಂಯುಕ್ತ ಹೊರನಾಡ್ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

2007ರಲ್ಲಿ ತೆರೆ ಕಂಡ ಚೇತನ್ ನಟನೆಯ ‘ಆ ದಿನಗಳು’ ಚಿತ್ರದಲ್ಲಿ ದಿವ್ಯ ನಾಯಕ್ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಇವರು 2011 ರಲ್ಲಿ ‘ಲೈಫು ಇಷ್ಟೇನೆ’ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದರು. 2014ರಲ್ಲಿ ‘ಒಗ್ಗರಣೆ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ಅಭಿನಯಿಸಿದ್ದ, ಸಂಯುಕ್ತ ಅವರಿಗೆ ಬೆಸ್ಟ್ ಸಪೋರ್ಟಿಂಗ್ ಆಕ್ಟರ್ ಎಂಬ ಪ್ರಶಸ್ತಿ ಕೂಡ  ದೊರೆಯಿತು.

ಕಳೆದ ವರ್ಷ ರಾಜ್ ಬಿ ಶೆಟ್ಟಿ ನಟನೆಯ ‘ಟೋಪಿ’ ಯಲ್ಲಿ ತೆರೆ ಹಂಚಿಕೊಂಡಿದ್ದ ಇವರು ಇತ್ತೀಚಿಗೆ ರೆಡ್ ರಮ್ ಎಂಬ ತಮಿಳು ಚಿತ್ರದ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸಂಯುಕ್ತ ಹೊರನಾಡು ಅವರಿಗೆ ಸಿನಿಮಾ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read